ಸ್ವಾತಂತ್ರ್ಯೋತ್ಸವಕ್ಕೆ ಸರ್ಕಾರದ ಕೊಡುಗೆ: ಆಗಸ್ಟ್‌ 15ರಂದು ಬಿಎಂಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣ

  • ಈ ಯೋಜನೆಯಿಂದ ಮೂರೂವರೆ ಕೋಟಿ ರೂ. ನಷ್ಟ
  • ಆಗಸ್ಟ್ 75ರಂದು ರಸ್ತೆಗಿಳಿಯಲಿವೆ ಹೊಸ ಎಲೆಕ್ಟ್ರಿಕ್ ಬಸ್‌ಗಳು 

75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) 25 ನೇ ವಾರ್ಷಿಕೋತ್ಸವದ ಪ್ರಯುಕ್ತ ಆಗಸ್ಟ್ 15 ರಂದು ನಗರದ ಪ್ರಯಾಣಿಕರು ಬಿಎಂಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸಾರಿಗೆ ಸಂಸ್ಥೆ ಅವಕಾಶ ಕಲ್ಪಿಸಿಕೊಟ್ಟಿದೆ.

ಬುಧವಾರ ಸುದ್ದಿಗೋಷ್ಠಿ ನಡೆಸಿದ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಅಧ್ಯಕ್ಷ ನಂದೀಶ್ ರೆಡ್ಡಿ, ನಗರದ ಪ್ರಯಾಣಿಕರು ತಾವಿರುವ ಸ್ಥಳದಿಂದ ಬೆಂಗಳೂರಿನ ಯಾವುದೇ ಪ್ರದೇಶಕ್ಕೆ ಉಚಿತವಾಗಿ ಸಂಚರಿಸಬಹುದು ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಕೆಎಂಎಫ್‌ ನೌಕರರಿಗೂ ಭ್ರಷ್ಟಾಚಾರ ನಿಗ್ರಹ ಕಾಯಿದೆ ಅನ್ವಯ: ಹೈಕೋರ್ಟ್

"ಆಗಸ್ಟ್ 15ರ ಉಚಿತ ಬಸ್ ಪ್ರಯಾಣ ಕಾರ್ಯಕ್ರಮದಿಂದಾಗಿ ಸರ್ಕಾರಕ್ಕೆ, ಸುಮಾರು ಮೂರೂವರೆ ಕೋಟಿ ರೂ. ನಷ್ಟವಾಗಲಿದೆ. ಆದರೂ ಕೂಡ ಸರ್ಕಾರ ಅನುಮತಿ ನೀಡಿದ ಕಾರಣ ಈ ಯೋಜನೆ ಜಾರಿಗೊಳಿಸಲಾಗಿದೆ" ಎಂದು ನಂದೀಶ್ ರೆಡ್ಡಿ ಹೇಳಿದರು.

ಆಗಸ್ಟ್‌ 15 ಸ್ವಾತಂತ್ರ್ಯ ದಿನಾಚರಣೆಯಂದು ಬಹುತೇಕರಿಗೆ ರಜೆ ಇರುವ ಕಾರಣ ಬೆಂಗಳೂರಿನಲ್ಲಿರುವ ವಿವಿಧ ಐತಿಹಾಸಿಕ ಸ್ಥಳಗಳನ್ನು ಬಿಎಂಟಿಸಿ ಬಸ್‌ಗಳಲ್ಲಿ ಉಚಿತವಾಗಿ ತೆರಳಿ ವೀಕ್ಷಿಸಬಹುದಾಗಿದೆ.       

ಆಗಸ್ಟ್‌ 15ರಂದು ಬೆಂಗಳೂರು ನಗರದ ನಿವಾಸಿಗಳಿಗೆ ಬಿಎಂಟಿಸಿಯು ಹೊಸ ಕೊಡುಗೆ ನೀಡಲು ಮುಂದಾಗಿದೆ. ಈಗಾಗಲೇ 90 ಎಲೆಕ್ಟ್ರಿಕ್ ಬಸ್‌ಗಳು ಕಾರ್ಯಾಚರಣೆ ನಡೆಸುತ್ತಿವೆ. ಈಗ ಅದರ ಜೊತೆಗೆ ಹೊಸ 75 ಎಲೆಕ್ಟ್ರಿಕ್ ಬಸ್‌ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ.

ನಿಮಗೆ ಏನು ಅನ್ನಿಸ್ತು?
0 ವೋಟ್