ಬೆಂಗಳೂರು | ಗಣೇಶೋತ್ಸವದ ಬಳಿಕ ಈದ್ಗಾದಲ್ಲಿ 'ಕನ್ನಡ ರಾಜ್ಯೋತ್ಸವ' ಆಚರಿಸಲು ಅವಕಾಶ ಕೊಡಿ ಎಂದ ಸಂಘಪರಿವಾರ!

  • ರಾಷ್ಟ್ರಧ್ಜಜ ಹಾರಿದ ರೀತಿಯೇ ನಾಡಧ್ವಜ ಹಾರಿಸಬೇಕು
  • ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲು ಮನವಿ

ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲು ಅನುಮತಿಗಾಗಿ ಸಂಘಪರಿವಾರ ಬೆಂಬಲಿತ ಸಂಘಟನೆಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್ ಅಶೋಕ್ ಅವರಿಗೆ ಮನವಿ ಸಲ್ಲಿಸಲು ಯೋಜನೆ ಹಾಕಿಕೊಂಡಿದೆ.

ಈ ಕುರಿತು ಈ ದಿನ.ಕಾಮ್ ಜೊತೆಗೆ ಮಾತನಾಡಿದ ವಿಶ್ವ ಹಿಂದೂ ಸನಾತನ ಪರಿಷತ್ ಅಧ್ಯಕ್ಷ ಎಸ್ ಭಾಸ್ಕರನ್, “ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲು ಅವಕಾಶ ಮಾಡಿಕೊಡಬೇಕು. ಈ ಬಗ್ಗೆ ಎಲ್ಲ ಹಿಂದೂಪರ ಸಂಘಟನೆಗಳು ಜಂಟಿಯಾಗಿ ಮನವಿ ಸಲ್ಲಿಸಲಿದ್ದೇವೆ. ಈದ್ಗಾ ಮೈದಾನ ಸರ್ಕಾರದ ಸ್ವತ್ತು. ಹಾಗಾಗಿ, ಈ ವರ್ಷದಿಂದಲೇ ಕನ್ನಡ ರಾಜ್ಯೋತ್ಸವ ಆಚರಿಸಲು ಅನುಮತಿ ನೀಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ವಿದ್ಯುತ್ ದರ ಏರಿಕೆ | ನಿರ್ಧಾರ ಕೈಬಿಡುವಂತೆ ಸಚಿವರಿಗೆ ಹೋಟೆಲ್ ಮಾಲೀಕರ ಸಂಘ ಮನವಿ

“ನಾಡಧ್ವಜ ಹಾರಿಸಲು ಸರ್ಕಾರ ಅನುಮತಿ ನೀಡಬೇಕು. ಈ ಕುರಿತು ಸೋಮವಾರ(ಇಂದು) ಎಲ್ಲ ಹಿಂದೂಪರ ಸಂಘಟನೆಗಳ ಸಭೆ ನಡೆಯುತ್ತದೆ. ಸಭೆ ಬಳಿಕ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಕಂದಾಯ ಸಚಿವರನ್ನು ಭೇಟಿ ಮಾಡಿ ರಾಷ್ಟ್ರ ಧ್ಜಜ ಹಾರಿದ ರೀತಿಯೇ ನಾಡಧ್ವಜವನ್ನು ಹಾರಿಸುವಂತೆ ಮನವಿ ಮಾಡಲಾಗುವುದು" ಎಂದರು.

ಕಳೆದ ಕೆಲ ಸಮಯದ ಹಿಂದೆ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡುವಂತೆ ಸಂಘಪರಿವಾರ ಬೆಂಬಲಿತ ಸಂಘಟನೆ ಹೈಕೋರ್ಟ್‌ ಮೆಟ್ಟಿಲೇರಿತ್ತು. ಕರ್ನಾಟಕ ಹೈಕೋರ್ಟ್‌ ದ್ವಿಸದಸ್ಯ ಪೀಠವು ಅವಕಾಶ ನೀಡಿ, ಆದೇಶಿಸಿದ್ದ ತೀರ್ಪನ್ನು ಪ್ರಶ್ನಿಸಿ ವಕ್ಫ್ ಮಂಡಳಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.

ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್‌ನ ತ್ರಿಸದಸ್ಯ ಪೀಠವು, ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಪಾಡಿಕೊಳ್ಳಲು ಸೂಚನೆ ನೀಡಿತ್ತು. ಪೀಠದ ಈ ಸೂಚನೆಯ ಹಿನ್ನೆಲೆಯಲ್ಲಿ ಆ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ನಡೆದಿದ್ದ ತಯಾರಿಗಳಿಗೆ ಒಂದು ದಿನ ಮುನ್ನವೇ ತಡೆ ಬಿದ್ದಿತ್ತು.

ನಿಮಗೆ ಏನು ಅನ್ನಿಸ್ತು?
0 ವೋಟ್