ಬೆಂಗಳೂರು | ರಸ್ತೆ ಸಮಸ್ಯೆ ಇದ್ದರೆ ಪ್ರಧಾನಿ ಮೋದಿ ಬರ್ತಿದ್ದಾರೆ ಅಂತ ಹೇಳಿ: ಬಿಬಿಎಂಪಿಯನ್ನು ಲೇವಡಿ ಮಾಡಿದ ನೆಟ್ಟಿಗರು

  • ಯಾರೋ ರಸ್ತೆ ಅಗೆದು ಹಾಗೇ ಬಿಟ್ಟಿದ್ದಾರೆ
  • ಪರ್ಯಾಯ ಮಾರ್ಗದಲ್ಲಿ ಸಂಚರಿಸಿ

ಬೆಂಗಳೂರಿನ ಅಯ್ಯಪ್ಪ ನಗರ ರಸ್ತೆಯಲ್ಲಿ ಅನುಮತಿ ಇಲ್ಲದೇ ಯಾರೋ ರಸ್ತೆ ಅಗೆದು ಹಾಗೇ ಬಿಟ್ಟಿದ್ದಾರೆ. ದುರಸ್ತಿ ಕಾರ್ಯ ನಡೆಸಲು ಪೊಲೀಸರು ಬಿಬಿಎಂಪಿಗೆ ಕರೆ ಮಾಡಿದರೂ ಯಾವ ಅಧಿಕಾರಿಗಳು ಕರೆ ಸ್ವೀಕರಿಸುತ್ತಿಲ್ಲ ಎಂದು ಕೆ ಆರ್ ಪುರಂ ಪೊಲೀಸರು ಟ್ವೀಟ್‌ ಮಾಡಿದ್ದರು. ಇದಕ್ಕೆ ಹಲವು ಮಂದಿ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿದ್ದಾರೆ.

"ಪ್ರಧಾನಿ ನರೆಂದ್ರ ಮೋದಿ ಅವರ ಯಾವುದಾದರೂ ಒಂದು ಕಾರ್ಯಕ್ರಮವನ್ನು ಆಯೋಜನೆ ಮಾಡಿ. ತಕ್ಷಣವೇ ರಸ್ತೆ ದುರಸ್ತಿ ಆಗಿ ಡಾಂಬರೀಕರಣವೂ ಆಗುತ್ತದೆ" ಎಂದು ಸುರೇಶ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಕೆ ಆರ್ ಪುರಂ ಸಂಚಾರಿ ಪೊಲೀಸರು, “ಅಯ್ಯಪ್ಪ ನಗರದಲ್ಲಿ ಯಾರೋ ಅನುಮತಿ ಇಲ್ಲದೇ ರಸ್ತೆ ಅಗೆದು ಹಾಗೇ ಬಿಟ್ಟು ತೆರಳಿದ್ದಾರೆ. ಈಗ ರಸ್ತೆ ದುರಸ್ತಿ ಕಾರ್ಯವನ್ನು ಮಾಡುತ್ತಿದ್ದು, ಸ್ವಲ್ಪ ಕಾಲಾವಕಾಶ ಬೇಕಾಗುತ್ತದೆ. ಹಾಗಾಗಿ, ಅಯ್ಯಪ್ಪ ನಗರ ರಸ್ತೆಯಲ್ಲಿ ಸಂಚರಿಸುವವರು ಪರ್ಯಾಯ ಮಾರ್ಗ ಬಳಿಸಿ ಸಂಚರಿಸಿ" ಎಂದು ಬೆಳಿಗ್ಗೆ ಟ್ವೀಟ್‌ ಮಾಡಿದ್ದರು.

“ಈ ಕುರಿತಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳಿಗೆ ಕರೆ ಮಾಡುತ್ತಿದ್ದು, ಯಾರೂ ಕರೆ ಸ್ವೀಕರಿಸುತ್ತಿಲ್ಲ. ಹಾಗಾಗಿ, ದಯವಿಟ್ಟು ರಸ್ತೆಯಲ್ಲಿ ಬಿದ್ದಿರುವ ಗುಂಡಿಯನ್ನು ಮುಚ್ಚಲು ಯಾರನ್ನಾದ್ದರೂ ಕಳುಹಿಸಿ” ಎಂದು ಮನವಿ ಮಾಡಿದ್ದರು.

ಬಳಿಕ ಮಧ್ಯಾಹ್ನದ ವೇಳೆಗೆ ಟ್ವೀಟ್‌ ಮಾಡಿದ ಸಂಚಾರಿ ಪೊಲೀಸರು, "ಹೇಗೋ ಹಳ್ಳಕ್ಕೆ ಮಣ್ಣು ತುಂಬಿ ತಾತ್ಕಾಲಿಕವಾಗಿ ಮುಚ್ಚಿದ್ದೇವೆ. ಗುಂಡಿಯನ್ನು ಸಂಪೂರ್ಣವಾಗಿ ಮತ್ತು ಶಾಶ್ವತವಾಗಿ ಸರಿಪಡಿಸಲು ಕಾಂಕ್ರೀಟ್ ಅಗತ್ಯವಿದೆ" ಎಂದು ತಿಳಿಸಿದ್ದಾರೆ. 

ನಿಮಗೆ ಏನು ಅನ್ನಿಸ್ತು?
0 ವೋಟ್
Image
av 930X180