ಬೆಂಗಳೂರು | ರಾಷ್ಟ್ರಪತಿ ಭೇಟಿ: ಪರ್ಯಾಯ ಮಾರ್ಗ ಬಳಕೆಗೆ ಸೂಚನೆ

  • ಕೆಲ ಏಕಮುಖ ರಸ್ತೆಗಳನ್ನು ದ್ವಿಮುಖ ರಸ್ತೆಗಳನ್ನಾಗಿ ಮಾರ್ಪಾಡು
  • ಸಂಚಾರದಟ್ಟಣೆ ತಪ್ಪಿಸಲು ಪರ್ಯಾಯ ಮಾರ್ಗ ಬಳಸಲು ಮನವಿ

ನಾಡಹಬ್ಬ ದಸರಾ ಉದ್ಘಾಟನೆ ಮತ್ತು ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಸೆ.26ರಂದು ಮೈಸೂರಿಗೆ ಆಗಮಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಬೆಂಗಳೂರಿಗೂ ಭೇಟಿ ನೀಡಲಿದ್ದಾರೆ. ಹೀಗಾಗಿ, ಸುಗಮ ಸಂಚಾರ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಕೆಲ ರಸ್ತೆಗಳನ್ನು ಬಳಸದೆ ಪರ್ಯಾಯ ರಸ್ತೆಗಳನ್ನು ಬಳಸಲು ಬೆಂಗಳೂರು ಸಂಚಾರಿ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಕಬ್ಬನ್‌ ಪಾರ್ಕ್‌ ಮತ್ತು ಅಶೋಕನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 26 ರಿಂದ 28ರವರೆಗೆ ಏಕಮುಖ ಸಂಚಾರ ರಸ್ತೆಗಳನ್ನು ದ್ವಿಮುಖ ಸಂಚಾರ ರಸ್ತೆಗಳನ್ನಾಗಿ ತಾತ್ಕಾಲಿಕವಾಗಿ ಮಾರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ. 

Eedina App

ಈ ರಸ್ತೆಗಳಲ್ಲಿ ಸಂಚಾರ ಬೇಡ

ಸೆ.26ರ ಸಂಜೆ 5.30ರಿಂದ 6 ಗಂಟೆಯ ವರೆಗೆ ಹಳೇ ವಿಮಾನ ನಿಲ್ದಾಣ ರಸ್ತೆ, ಎಂಜಿ ರಸ್ತೆ, ಡಿಕನ್ಸನ್ ರಸ್ತೆ, ಕೆಆರ್ ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆಗಳಲ್ಲಿ ಸಾರ್ವಜನಿಕರು ಸಂಚರಿಸುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.

AV Eye Hospital ad

ಸೆ.27ರ ಬೆಳಿಗ್ಗೆ 9.30ರಿಂದ 11.30ರ ವರೆಗೆ ರಾಜಭವನ ರಸ್ತೆ, ಇನ್ ಫೆಂಟ್ರಿ ರಸ್ತೆ, ಕೆಆರ್ ರಸ್ತೆ, ಕಬ್ಬನ್ ರಸ್ತೆ, ಡಿಕನ್ಸನ್ ರಸ್ತೆ, ಎಂಜಿ ರಸ್ತೆ, ಹಳೇ ವಿಮಾನ ನಿಲ್ದಾಣ ರಸ್ತೆ, ಸುರಂಜನ್ ದಾಸ್ ರಸ್ತೆಗಳನ್ನು ಬಳಸದೇ, ಆಸುಪಾಸಿನಲ್ಲಿರುವ ಇತರ ರಸ್ತೆಗಳಲ್ಲಿ ಸಾರ್ವಜನಿಕರು ಸಂಚರಿಸಲು ತಿಳಿಸಿದ್ದಾರೆ. 

ಅದೇ ದಿನದ ಮಧ್ಯಾಹ್ನ 3.40ರಿಂದ ರಾತ್ರಿ 8ರವರೆಗೆ ರಾಜಭವನ ರಸ್ತೆ, ಇನ್ ಫೆಂಟ್ರಿ ರಸ್ತೆ, ಕ್ವೀನ್ಸ್‌ ರಸ್ತೆ, ಕಸ್ತೂರಿ ಬಾ ರಸ್ತೆ, ರಿಚ್ಮಂಡ್‌ ರಸ್ತೆ, ಲ್ಯಾಂಗ್ ಫೋರ್ಡ್ ರಸ್ತೆ, ಅಂಬೇಡ್ಕರ್ ರಸ್ತೆಗಳಲ್ಲಿ ಸಂಚರಿಸದಿರಲು ಸೂಚನೆ ನೀಡಿದ್ದಾರೆ. 

ಸೆ.28ರ ಬೆಳಿಗ್ಗೆ 9ರಿಂದ 9.30ರವರೆಗೂ ರಾಜಭವನ ರಸ್ತೆ, ಇನ್ಫೆಂಟ್ರಿ ರಸ್ತೆ, ಕೆಆರ್‍ ರಸ್ತೆ, ಕಬ್ಬನ್ ರಸ್ತೆ, ಡಿಕನ್ಸನ್‌ ರಸ್ತೆ, ಎಂಜಿ ರಸ್ತೆ, ಹಳೇ ವಿಮಾನ ನಿಲ್ದಾಣ ರಸ್ತೆಗಳನ್ನು ಬಳಸದಿರಲು ಸೂಚನೆ ನೀಡಿದ್ದಾರೆ.

ಕಬ್ಬನ್ ಪಾರ್ಕ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಭವನ ರಸ್ತೆಯನ್ನು ರಾಜಭವನ ಮುಖ್ಯದ್ವಾರದಿಂದ ಪೊಲೀಸ್ ತಿಮ್ಮಯ್ಯ ವೃತ್ತದವರೆಗೆ ತಾತ್ಕಾಲಿಕವಾಗಿ ದ್ವಿಮುಖ ಸಂಚಾರ ರಸ್ತೆಯನ್ನಾಗಿ ಮಾರ್ಪಡಿಸಲಾಗಿದೆ. ವಿಧಾನಸೌಧದ ನಿರ್ಗಮನ ದ್ವಾರ (ಗೇಟ್ ನಂ.4)ದಲ್ಲಿ ಪ್ರವೇಶ ನಿಷೇಧವಿದ್ದು, ಸೆ.27ರ ವರೆಗೆ ರಾಷ್ಟ್ರಪತಿಯವರು ಸಂಚರಿಸುವ ಸಮಯದಲ್ಲಿ ಮುಕ್ತ ಪ್ರವೇಶಕ್ಕೆ ಅನುವು ಮಾಡಿಕೊಡಲಾಗಿದೆ.

ಈ ಸುದ್ದಿ ಓದಿದ್ದೀರಾ?: ಮೂರು ದಿನಗಳ ರಾಜ್ಯ ಪ್ರವಾಸದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಏನೇನು ಮಾಡಲಿದ್ದಾರೆ?

ಅಶೋಕನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ರಿಚ್ಮಂಡ್ ರಸ್ತೆಯಲ್ಲಿ ರಿಚ್ಮಂಡ್ ವೃತ್ತದಿಂದ ಬಾಲ್ಡ್​ವಿನ್ ಬಾಲಕಿಯರ ಶಾಲೆಯ ವೃತ್ತದವರೆಗೆ ತಾತ್ಕಾಲಿಕವಾಗಿ ದ್ವಿಮುಖ ಸಂಚಾರ ರಸ್ತೆಯನ್ನಾಗಿ ಮಾರ್ಪಡಿಸಲಾಗಿದೆ. ರಾಷ್ಟ್ರಪತಿಯವರು ಸಂಚರಿಸುವ ಸಮಯದಲ್ಲಿ ಮಾತ್ರ ಅನುವು ಮಾಡಿಕೊಡಲಾಗಿದೆ.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app