
- ಮೈಸೂರು ರಸ್ತೆ ಮತ್ತು ಕೆಂಗೇರಿ ನಡುವೆ ಮೆಟ್ರೋ ಸೇವೆ ತಾತ್ಕಾಲಿಕವಾಗಿ ಸ್ಥಗಿತ
- ಬೈಯಪ್ಪನಹಳ್ಳಿಯಿಂದ ಮೈಸೂರು ರಸ್ತೆ ನಿಲ್ದಾಣದವರೆಗೆ ಮೆಟ್ರೋ ಸೇವೆ ಲಭ್ಯ
ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ನೇರಳೆ ಮಾರ್ಗದ ಮೈಸೂರು ರಸ್ತೆ ಮತ್ತು ಕೆಂಗೇರಿ ನಡುವಿನ ಮೆಟ್ರೋ ರೈಲು ಸೇವೆ ಜ.27ರಿಂದ 30ರವರೆಗೆ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ಹೇಳಿದೆ.
ಬೆಂಗಳೂರಿನಲ್ಲಿ ಕೆಂಗೇರಿಯಿಂದ ಚೆಲ್ಲಘಟ್ಟವರೆಗೆ ನಮ್ಮ ಮೆಟ್ರೋ ವಿಸ್ತರಣಾ ಮಾರ್ಗದ ಕಾರ್ಯಾರಂಭಕ್ಕೆ ಸಂಬಂಧಿಸಿದ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಜ.27ರಿಂದ 30ರವರೆಗೆ ಮೈಸೂರು ರಸ್ತೆ ಮತ್ತು ಕೆಂಗೇರಿ ನಡುವಿನ ಮೆಟ್ರೋ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ ಎಂದು ಹೇಳಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು| ವಿದ್ಯುತ್ ದುರಸ್ತಿ ವೇಳೆ ನೌಕರ ಸಾವು; ಎಂಜಿನಿಯರ್ಗಳ ವಿರುದ್ಧ ಎಫ್ಐಆರ್ ದಾಖಲು
ಈ ಅವಧಿಯಲ್ಲಿ ನೇರಳೆ ಮಾರ್ಗದಲ್ಲಿ ಬೈಯಪ್ಪನಹಳ್ಳಿಯಿಂದ ಮೈಸೂರು ರಸ್ತೆ ನಿಲ್ದಾಣದವರೆಗೆ ಮಾತ್ರ ನಮ್ಮ ಮೆಟ್ರೋ ಸೇವೆ ಲಭ್ಯ ಇರಲಿದೆ. ಬೈಯಪ್ಪನಹಳ್ಳಿಯಿಂದ ಕೆಂಗೇರಿವರೆಗಿನ ಮಾರ್ಗದಲ್ಲಿ ರೈಲು ಸೇವೆಗಳು ಜ.31ರ ಬೆಳಿಗ್ಗೆ 5ಗಂಟೆಗೆ ಪುನಾರಂಭವಾಗಲಿದೆ ಎಂದು ಹೇಳಿದೆ.
ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವಿನ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.