ಬೆಂಗಳೂರು |ಮತದಾರರ ಪಟ್ಟಿಯ ಸಂಪೂರ್ಣ ಪರಿಶೀಲನೆಗೆ ವಿಶೇಷ ಅಧಿಕಾರಿಗಳ ನಿಯೋಜನೆ

  • ಮಹದೇವಪುರ ವಿಧಾನಸಭಾ ಕ್ಷೇತ್ರಕ್ಕೆ ಅಜಯ್ ನಾಗಭೂಷಣ್
  • ನ.25 ರಂದು ನಿರ್ದೇಶನ ನೀಡಿದ ಭಾರತದ ಚುನಾವಣಾ ಆಯೋಗ

ಬೆಂಗಳೂರಿನ ಶಿವಾಜಿನಗರ, ಚಿಕ್ಕಪೇಟೆ, ಮಹದೇವಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯನ್ನು ಶೇ. 100ರಷ್ಟು ಪರಿಶೀಲನೆ ಮಾಡಲು ವಿಶೇಷ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೇಳಿದೆ.

162-ಶಿವಾಜಿನಗರ ವಿಧಾನಸಭಾ ಕ್ಷೇತ್ರಕ್ಕೆ ಪ್ರಿಯಾಂಕ ಮೇರಿ ಫ್ರಾನ್ಸಿಸ್, 169- ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಡಾ. ಆರ್. ವಿಶಾಲ್, ಹಾಗೂ 174-ಮಹದೇವಪುರ ವಿಧಾನಸಭಾ ಕ್ಷೇತ್ರಕ್ಕೆ ಅಜಯ್ ನಾಗಭೂಷಣ್ ಅವರನ್ನು ಮತದಾರರ ಪಟ್ಟಿಯನ್ನು ಶೇ. 100ರಷ್ಟು ಪರಿಶೀಲನೆ ಮಾಡಲು ವಿಶೇಷ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ ಎಂದು ತಿಳಿಸಿದೆ.

Eedina App

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೆಂಗಳೂರು ವ್ಯಾಪ್ತಿಯಲ್ಲಿ ಬರುವ ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಅನಧಿಕೃತವಾಗಿ ಮತದಾರರ ಮಾಹಿತಿಯನ್ನು ಸಂಗ್ರಹಿಸಿರುವುದಾಗಿ ದೂರು ದಾಖಲಾಗಿರುವ ಹಿನ್ನಲೆಯಲ್ಲಿ, ಭಾರತ ಚುನಾವಣಾ ಆಯೋಗ ನ.25 ರಂದು ಕೆಲವು ನಿರ್ದೇಶನ ನೀಡಿದೆ.

ಈ ಸುದ್ದಿ ಓದಿದ್ದೀರಾ? ಬಿಎಂಟಿಸಿ ಆಯಿತು, ಈಗ ಕೆಎಸ್‌ಆರ್‌ಟಿಸಿಯಲ್ಲೂ ಎಲೆಕ್ಟ್ರಿಕ್ ಬಸ್‌ಗಳು | ಬೆಂಗಳೂರಿನಿಂದ ರಾಜ್ಯದ ಐದು ಜಿಲ್ಲೆಗಳಿಗೆ ಸಂಚಾರ

AV Eye Hospital ad

ನಿರ್ದೇಶನಗಳು

  • ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜನವರಿ 1, 2022 ಮತದಾರರ ಪಟ್ಟಿಗೆ ಸೇರ್ಪಡೆ ಮತ್ತು ತೆಗೆದುಹಾಕಿರುವ ಎಲ್ಲ ವಿವರಗಳನ್ನು ಶೇ. 100ರಷ್ಟು ಪರಿಶೀಲಿಸುವುದು.
  • ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿಯನ್ನು ಡಿಸೆಂಬರ್ 9, 2022 ರಿಂದ ಡಿಸೆಂಬರ್ 24, 2022ರವರೆಗೆ 15 ದಿನ ಹೆಚ್ಚಿನ ಕಾಲಾವಕಾಶವನ್ನು ವಿಸ್ತರಿಸಿದೆ.
  • ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸೇರ್ಪಡೆ ಮತ್ತು ತೆಗೆದುಹಾಕಿರುವ ವಿವರಗಳನ್ನು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಗೆ ಒದಗಿಸಲು ನಿರ್ದೇಶನ ನೀಡಿದೆ.
ನಿಮಗೆ ಏನು ಅನ್ನಿಸ್ತು?
0 ವೋಟ್
eedina app