ಬೆಂಗಳೂರು | ಜನಪ್ರತಿನಿಧಿಗಳಿಂದ ಪ್ರಜಾಪ್ರಭುತ್ವದ ದಮನ : ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ

  • ಬೃಹತ್ ಪಾದಯಾತ್ರೆ ಹಾಗೂ ಜನಜಾಗೃತಿ ಕಾರ್ಯಕ್ರಮ
  • ನೋವು-ದುಮ್ಮಾನಗಳ ಪರಿಹಾರಕ್ಕಾಗಿ 'ಆಪ್‌' ಅಪ್ಪಿಕೊಳ್ಳಿ

ಪರಕೀಯರಿಂದ ಸ್ವತಂತ್ರಗೊಂಡು 75 ವರ್ಷಗಳು ಕಳೆದರೂ ಕೂಡ, ನಮ್ಮನ್ನಾಳುತ್ತಿರುವ ಜನಪ್ರತಿನಿಧಿಗಳು ಅಂಥದ್ದೇ ಪ್ರಭುತ್ವವನ್ನು ಉಳಿಸಿಕೊಂಡು, ಪ್ರಜಾಪ್ರಭುತ್ವವನ್ನು ದಮನ ಮಾಡುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿ ಎಂದು ಅಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು.

ಬೆಂಗಳೂರಿನ ವಿಜಯನಗರ ವಿಧಾನಸಭಾ ಕ್ಷೇತ್ರದ ಬಾಪೂಜಿನಗರ ವಾರ್ಡ್‌ನಲ್ಲಿ ಭಾನುವಾರ ಆಮ್ ಆದ್ಮಿ ಪಕ್ಷದ ವತಿಯಿಂದ ಬೃಹತ್ ಪಾದಯಾತ್ರೆ ಹಾಗೂ ಜನಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಪಾದಯಾತ್ರೆ ವೇಳೆ ಮಾತನಾಡಿದ ಅವರು, "ನಮ್ಮ ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಆಮ್ ಆದ್ಮಿ ಪಕ್ಷದ ಜನ ಸಾಮಾನ್ಯನನ್ನು ಗೆಲ್ಲಿಸುವುದೊಂದೇ, ನಮ್ಮ ಮುಂದಿರುವ ಏಕೈಕ ಮಾರ್ಗ. ಜನಸಾಮಾನ್ಯನ ಅಳಲು, ನೋವು-ದುಮ್ಮಾನಗಳ ಪರಿಹಾರಕ್ಕಾಗಿ ಆಮ್ ಆದ್ಮಿ ಪಕ್ಷವನ್ನು ಅಪ್ಪಿಕೊಳ್ಳುವುದು ಈಗ ಇರುವ ಏಕೈಕ ದಾರಿ" ಎಂದು ತಿಳಿಸಿದರು.

"ಮುಂಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಬೃಹತ್ ಬಹುಮತದಿಂದ ಪಾಲಿಕೆಯ ಕೈ ಹಿಡಿಯಲಿದೆ" ಎಂದು ತಿಳಿಸಿದರು.

AV Eye Hospital ad

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋ | ವಾಟ್ಸ್ಆ್ಯಪ್ ಕ್ಯೂಆರ್ ಕೋಡ್ ಆಧಾರಿತ ಟಿಕೆಟ್ ಬಳಕೆ; ಉತ್ತಮ ಸ್ಪಂದನೆ

ಸ್ಥಳೀಯ ಬೃಹತ್ ಜನಸ್ತೋಮದೊಂದಿಗೆ ಪಾದಯಾತ್ರೆ ಯಶಸ್ವಿಯಾಯಿತು. ಪಾದಯಾತ್ರೆಯಲ್ಲಿ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಸೇರಿದಂತೆ ಡಾ. ರಮೇಶ್ ಬೆಲ್ಲಮಕೊಂಡ, ರಹೀಂಖಾನ್, ಅರ್ಚನಾ ಹಾಗೂ ಇನ್ನಿತರ ಸ್ಥಳೀಯ ಮುಖಂಡರುಗಳು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app