
- ಮೆಜೆಸ್ಟಿಕ್ನಲ್ಲಿ ವೈಟ್ ಟಾಪಿಂಗ್ ಕಾಮಗಾರಿ; ಸಂಚಾರ ನಿರ್ಭಂಧ
- ರೈಲು ನಿಲ್ದಾಣದ ಎದುರಿನ 580 ಮೀಟರ್ ರಸ್ತೆಯಲ್ಲಿ ಕಾಮಗಾರಿ
ಮೆಜೆಸ್ಟಿಕ್ನ ಶಾಂತಲಾ ಸರ್ಕಲ್ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ (ರೈಲ್ವೆ ನಿಲ್ದಾಣದ ಕಡೆ) ಶನಿವಾರದಿಂದ ವೈಟ್ ಟಾಪಿಂಗ್ ಕಾಮಗಾರಿ ಪ್ರಾರಂಭವಾಗಲಿದ್ದು, ಈ ಮಾರ್ಗದಲ್ಲಿ ಸಂಚಾರ ನಿರ್ಬಂಧಿಸಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತಿಳಿಸಿದೆ.
ಬಿಬಿಎಂಪಿಯ 'ಯೋಜನೆ ಕೇಂದ್ರ-1' ವಿಭಾಗದ ವತಿಯಿಂದ ಬೆಂಗಳೂರಿನ ಗುಬ್ಬಿ ತೋಟದಪ್ಪ ರಸ್ತೆಯ ಶಾಂತಲಾ ವೃತ್ತದಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ನ.19 ರಿಂದ ಡಿ.18 ರವರೆಗೆ ಸುಮಾರು 580 ಮೀಟರ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಸಲಾಗುತ್ತದೆ ಎಂದು ಹೇಳಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು| ನ.18ರಿಂದ 20ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
ವೈಟ್ ಟಾಪಿಂಗ್ ಕಾಮಗಾರಿ ನಡೆಯುವ ಕಾರಣ ನ.19 ರಿಂದ ಡಿ.18 ರವರೆಗೆ ಶಾಂತಲಾ ಸರ್ಕಲ್ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಸಂಚಾರ ನಿರ್ಬಂಧಿಸಲಾಗುವುದು. ಈ ಅವಧಿಯಲ್ಲಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಆಗುವ ಅನಾನುಕೂಲ ತಪ್ಪಿಸಲು ಪರ್ಯಾಯ ರಸ್ತೆಗಳಲ್ಲಿ ಸಂಚರಿಸಿ. ಈ ಸಂಬಂಧ ಸಾರ್ವಜನಿಕರು ಹಾಗೂ ವಾಹನ ಸವಾರರು ಸಹಕರಿಸಬೇಕು ಎಂದು ಬಿಬಿಎಂಪಿ ಕೇಳಿದೆ.