ಬೆಂಗಳೂರು| ಬಿಬಿಎಂಪಿ ಮಾಜಿ ಸದಸ್ಯೆಯ ₹3.35 ಕೋಟಿ ಮೌಲ್ಯದ ಆಸ್ತಿ ಜಪ್ತಿ

  • ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ ಲೋಕಾಯುಕ್ತ ಪೊಲೀಸರು
  • ಪತಿ ಗೋವಿಂದರಾಜು ಜತೆಗೆ ಸೇರಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾಜಿ ಸದಸ್ಯೆ ಸಿ ಜಿ ಗೌರಮ್ಮ ದಂಪತಿಗೆ ಸೇರಿದ್ದ ₹3.35 ಕೋಟಿ ಮೌಲ್ಯ ಆಸ್ತಿಯನ್ನು ಅಕ್ರಮ ಹಣಕಾಸು ಆರೋಪ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಬಿಬಿಎಂಪಿಯ ಅಜಾದ್‌ನಗರ ವಾರ್ಡ್‌ನ ಮಾಜಿ ಸದಸ್ಯೆ ಸಿ ಜಿ ಗೌರಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರು ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದಡಿ ಪ್ರಕರಣ ದಾಖಲಿಸಿದ್ದರು.

ಈ ಕುರಿತು ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ ಶೀಟ್‌ ಸಲ್ಲಿಸಿದ್ದರು.

ಬಿಬಿಎಂಪಿ ವಾರ್ಡ್‌ ಸದಸ್ಯೆ ಆಗಿದ್ದಾಗ ಸಿ ಜಿ ಗೌರಮ್ಮ ಅವರು ಅಧಿಕಾರ ದುರುಪಯೋಗಪಡಿಸಿಕೊಂಡು ಪತಿ ಗೋವಿಂದರಾಜು ಜತೆಗೆ ಸೇರಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಮಾಡಿದ್ದರು. ಹಾಗೂ ನಾನಾ ಬ್ಯಾಂಕ್ ಖಾತೆಗಳಿಗೆ ಹಣ ಜಮೆ ಮತ್ತು ಸ್ಥಿರಾಸ್ತಿಗಳನ್ನು ಸಂಪಾದನೆ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಮಳೆ ಹಾನಿ | ಸಮರೋಪಾದಿಯಲ್ಲಿ ರಕ್ಷಣೆ, ಪರಿಹಾರ, ಪುನಶ್ಚೇತನ ಕಾರ್ಯ ಕೈಗೊಳ್ಳಿ: ಸಿಎಂ ಸೂಚನೆ

'₹3.46 ಕೋಟಿ ಮೌಲ್ಯದ ಕೃಷಿ ಭೂಮಿ, ಮನೆ, ಪ್ಲ್ಯಾಟ್ ಮತ್ತು ವಾಣಿಜ್ಯ ಮಳಿಗೆಗಳನ್ನು 2010 ರಿಂದ 13ರವರೆಗಿನ ಅವಧಿಯಲ್ಲಿ ಸಂಪಾದನೆ ಮಾಡಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು, ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಇದರ ಆಧಾರದ ಮೇಲೆ ಅಕ್ರಮ ಹಣಕಾಸು ಸಂಪಾದನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು, ₹3.35 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಮಾಡಲಾಗಿದೆ' ಎಂದು ಇ.ಡಿ. ಅಧಿಕಾರಿಗಳು ತಿಳಿಸಿದ್ದಾರೆ.

ಗೌರಮ್ಮ ಮತ್ತು ಅವರ ಪತಿ ಗೋವಿಂದರಾಜು ಅವರು ಆರ್‌ಟಿಐ ಕಾರ್ಯಕರ್ತ ಲಿಂಗರಾಜು ಕೊಲೆ ಪ್ರಕರಣದಲ್ಲಿ ಆರೋಪಗಳಾಗಿದ್ದರು. ಆರೋಪ ಸಾಬೀತಾಗಿ ದಂಪತಿ ಸೇರಿದಂತೆ ಹಲವರಿಗೆ ವಿಚಾರಣಾಧೀನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು.  

ನಿಮಗೆ ಏನು ಅನ್ನಿಸ್ತು?
1 ವೋಟ್