ಬಿಬಿಎಂಪಿ ಬುಲ್ಡೋಜರ್ | ಬೆಂಗಳೂರಿನಲ್ಲಿ ಒತ್ತುವರಿ ತೆರವು ಹಾಗೂ ಸರ್ವೇ ಕಾರ್ಯ ಪುನಾರಂಭ

  • ಗುರುವಾರವೂ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆಯಲಿದೆ
  • ಮಹದೇವಪುರ ವಲಯದಲ್ಲಿ 5,000 ಮೀಟರ್ ರಾಜಕಾಲುವೆ ಒತ್ತುವರಿಯಾಗಿದೆ

ನಗರದಲ್ಲಿ ಬೃಹತ್ ನೀರುಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಕಡೆಗಳಲ್ಲಿ ಸರ್ವೇ ನಡೆಸಿ ಮಾರ್ಕಿಂಗ್ ಮಾಡಿ, ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಬಿಬಿಎಂಪಿ ಹೇಳಿದೆ.

ಬೆಂಗಳೂರಿನ ಬೊಮ್ಮನಹಳ್ಳಿ ವಲಯದ ಕೋಡಿಚಿಕ್ಕನಹಳ್ಳಿ ವ್ಯಾಪ್ತಿಯ ಜನಪ್ರಿಯ ಲೇಕ್ ವ್ಯೂ ಅಪಾರ್ಟ್‌ಮೆಂಟ್ ಬಳಿ 11 ಅಡಿ ಅಗಲ ಹಾಗೂ 100 ಅಡಿ ಉದ್ದದ ರಾಜಕಾಲುವೆಯ ಒತ್ತುವರಿ ತೆರವು ಕಾರ್ಯಾಚರಣೆ ಬುಧವಾರ ನಡೆಸಲಾಗಿದೆ.

ಬುಧವಾರ ಬೊಮ್ಮನಹಳ್ಳಿ ವಾರ್ಡ್ ಕೋಡಿಚಿಕ್ಕನಹಳ್ಳಿ ವ್ಯಾಪ್ತಿಯ ಜನಪ್ರಿಯ ಲೇಕ್ ವ್ಯೂ (ಫೇಸ್-2, ಗೇಟ್-1) ಬಳಿ 2 ಕಾಂಪೌಂಡ್ ಗೋಡೆ, 1 ಖಾಲಿ ಜಾಗ ಹಾಗೂ ರಾಜಕಾಲುವೆ ಮೇಲೆ ನಿರ್ಮಿಸಿದ್ದ ರಸ್ತೆಯನ್ನು ತೆರವುಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ. ಸದರಿ ಸ್ಥಳದಲ್ಲಿ ಗುರುವಾರವೂ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಬಿಬಿಎಂಪಿ ತಿಳಿಸಿದೆ.

ಮಹದೇವಪುರ ವಲಯದಲ್ಲಿ ಸರ್ವೇ ಕಾರ್ಯ

"ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಪಣತ್ತೂರು, ಹೂಡಿ, ದೊಡ್ಡನೆಕ್ಕುಂದಿ, ವರ್ತೂರು, ಕುಂದನಹಳ್ಳಿ, ಮುನ್ನೇಕೊಳಲು, ಕಸವನಹಳ್ಳಿಯ ಪ್ರದೇಶಗಳಲ್ಲಿ ಸುಮಾರು 5,000 ಮೀಟರ್ ರಾಜಕಾಲುವೆ ಒತ್ತುವರಿಯಾಗಿದ್ದು, ಭೂಮಾಪಕರು ಮಾರ್ಕಿಂಗ್ ಮಾಡಿರುವ ಪ್ರಕಾರ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಬೇಕಿದೆ" ಎಂದು ಮಹದೇವಪುರ ವಲಯದ ಮುಖ್ಯ ಅಭಿಯಂತರ ಬಸವರಾಜ ಕಬಾಡೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 'ಗೊಂಬೆ ಹಬ್ಬ'; ಪ್ರಯಾಣಿಕರ ಸಂತಸ

"ಈ ಪೈಕಿ ಸರ್ವೇ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಿ ಮಾರ್ಕಿಂಗ್ ಮಾಡಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಲು ರಾಜಕಾಲುವೆ ವಿಭಾಗದ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ" ಎಂದು ಅವರು ಹೇಳಿದರು.

ನಿಮಗೆ ಏನು ಅನ್ನಿಸ್ತು?
0 ವೋಟ್
Image
av 930X180