ಬಿಬಿಎಂಪಿ ಚುನಾವಣೆ| ಬಿಜೆಪಿ 160ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಗುರಿ: ಅಶ್ವತ್ಥ ನಾರಾಯಣ್

  • ಬಿಬಿಎಂಪಿ ಚುನಾವಣೆ ಬಗ್ಗೆ ಸರ್ಕಾರ, ಪಕ್ಷ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ
  • ಬಿಜೆಪಿ ಸಾಧನೆ ಕಾರ್ಯಕ್ರಮ ಯಶಸ್ವಿಗೊಳಿಸಲು ದೊಡ್ಡಬಳ್ಳಾಪುರದಲ್ಲಿ ಸಭೆ

“ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಯಲ್ಲಿ ಬಿಜೆಪಿ 160ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕೆಂಬ ಕುರಿತು ಇಂದಿನ ಸಭೆಯಲ್ಲಿ ಚರ್ಚೆ ನಡೆದಿದೆ” ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಸಚಿವ ಅಶ್ವತ್ಥ ನಾರಾಯಣ್ ಹೇಳಿದರು.

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇಂದು ಬಿಜೆಪಿಯ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಬೆಂಗಳೂರು ಕೇಂದ್ರದ ಎಲ್ಲ ಜಿಲ್ಲಾ ಪದಾಧಿಕಾರಿಗಳು, ಮಂಡಲ ಪದಾಧಿಕಾರಿಗಳು ಹಾಗೂ ಬೆಂಗಳೂರು ಮಹಾನಗರ ವ್ಯಾಪ್ತಿಯ ರಾಜ್ಯ ಪದಾಧಿಕಾರಿಗಳ ಪರಿಚಯಾತ್ಮಕ ಸಭೆ ನಡೆಸಲಾಗಿದೆ. ನೂತನ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಅವರ ಪರಿಚಯ ಕಾರ್ಯವನ್ನು ನೆರವೇರಿಸಲಾಗಿದೆ” ಎಂದು ತಿಳಿಸಿದರು.

“ಬಿಬಿಎಂಪಿ ಚುನಾವಣೆ, ಸರ್ಕಾರದಿಂದ ಪ್ರಾಧಿಕಾರಕ್ಕೆ ನೇಮಕಾತಿ ವಿಚಾರವಾಗಿ ಕಾರ್ಯಕರ್ತರು ಉಲ್ಲೇಖ ಮಾಡಿದ್ದು, ಸೂಕ್ತ ಸಂದರ್ಭದಲ್ಲಿ ಸೂಕ್ತ ತೀರ್ಮಾನವನ್ನು ಸರ್ಕಾರ ಮತ್ತು ಪಕ್ಷ ತೆಗೆದುಕೊಳ್ಳಲಿದೆ ಎಂದು ಜಿ ವಿ ರಾಜೇಶ್ ಅವರು ತಿಳಿಸಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಸ್ನೇಹಿತೆಯ ಖಾತೆಗೆ 14 ಲಕ್ಷ ರೂ. ಸಾರ್ವಜನಿಕ ಹಣ ವರ್ಗಾಯಿಸಿದ ಬಿಬಿಎಂಪಿ ನೌಕರನ ಬಂಧನ

“ಸೆಪ್ಟೆಂಬರ್ 8ರಂದು ನಡೆಯುವ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದ ಒಂದು ವರ್ಷದ ಸಾಧನೆ ಮತ್ತು ಬಿಜೆಪಿಯ ಮೂರು ವರ್ಷದ ಸಾಧನೆ ಸಂಬಂಧ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಗುರುವಾರ ದೊಡ್ಡಬಳ್ಳಾಪುರದಲ್ಲಿ ಕರೆದ ಸಭೆಯ ಕುರಿತು ಚರ್ಚಿಸಲಾಗಿದೆ. ಸರ್ಕಾರದ ಸಾಧನೆ, ಅಭಿವೃದ್ಧಿ ಮತ್ತು ಸಂಘಟನಾತ್ಮಕವಾಗಿ ಬಿಬಿಎಂಪಿ ಚುನಾವಣೆಯನ್ನು ಎದುರಿಸಲು ನಿರ್ಧರಿಸಲಾಗಿದೆ. ಕಾಂಗ್ರೆಸ್ಸಿನ ಜನವಿರೋಧಿ ನೀತಿಯಿಂದ ಅಭಿವೃದ್ಧಿ ಕುಂಠಿತವಾಗಿದೆ” ಎಂದು ವಿವರಿಸಿದರು.

ನಿಮಗೆ ಏನು ಅನ್ನಿಸ್ತು?
0 ವೋಟ್