ಬಿಬಿಎಂಪಿ ಚುನಾವಣೆ| ಮಧ್ಯಂತರ ಆದೇಶ ನೀಡಲು ಹೈಕೋರ್ಟ್ ನಿರಾಕರಣೆ

  • ಆ. 29ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ
  • ಸೆ. 22ರಿಂದ ಚುನಾವಣೆ ಪ್ರಕ್ರಿಯೆ ಆರಂಭ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಾರ್ಡ್‌ಗಳ ಮರುವಿಂಗಡಣೆ ಕುರಿತಂತೆ ಮಧ್ಯಂತರ ಆದೇಶ ನೀಡಲು ಹೈಕೋರ್ಟ್ ನಿರಾಕರಿಸಿದೆ.

ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ ಹೇಮಂತ್ ಚಂದನ್ ಗೌಡರ್, 'ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ, ಸರ್ಕಾರ ಎಲ್ಲವನ್ನೂ ತರಾತುರಿಯಾಗಿ ಮಾಡುತ್ತಿದೆ ಎಂದು ಅರ್ಜಿದಾರರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಸುಪ್ರೀಂ ಕೋರ್ಟ್‌ನಿಂದಲೇ ಸ್ಪಷ್ಟನೆ ಪಡೆಯುವುದು ಸೂಕ್ತ' ಎಂದರು.

'ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಮಧ್ಯಂತರ ಆದೇಶ ನೀಡಲು ಬರುವುದಿಲ್ಲ. ಅರ್ಜಿಯ ವಿಚಾರಣೆಯನ್ನು ಆ. 29 ಕ್ಕೆ ಮುಂದೂಡಲಾಗಿದೆ' ಎಂದು ತಿಳಿಸಿದರು.

ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ, ಸೆ. 22ರಿಂದ ಚುನಾವಣೆ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಚುನಾವಣಾ ಆಯೋಗದ ಪರ ವಕೀಲ ಕೆ ಎನ್ ಫಣೀಂದ್ರ ಹೈಕೋರ್ಟ್‌ಗೆ ತಿಳಿಸಿದ್ದಾರೆ

ಈ ಸುದ್ದಿ ಓದಿದ್ದೀರಾ?  ಬಿಬಿಎಂಪಿ | ಮೀಸಲಾತಿಗೆ ತಡೆ ನೀಡಿದರೆ ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆ; ಚುನಾವಣಾ ಆಯೋಗದ ಪ್ರತಿಪಾದನೆ

ಬಿಬಿಎಂಪಿ ವಾರ್ಡ್ ವಿಂಗಡಣೆಯನ್ನು ವಿರೋಧಿಸಿ ಸಲ್ಲಿಸಿರುವ ಅರ್ಜಿಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗ ಅರ್ಜಿದಾರರ ಯಾವುದೇ ಮನವಿ ಪರಿಗಣಿಸಬಾರದೆಂದು ನ್ಯಾಯಾಲಯಕ್ಕೆ ಮನವಿ ಮಾಡಿವೆ.

ನಿಮಗೆ ಏನು ಅನ್ನಿಸ್ತು?
0 ವೋಟ್