ಬಿಬಿಎಂಪಿ ಚುನಾವಣೆ | ವಾರ್ಡ್‌ವಾರು ಮೀಸಲಾತಿ ಪ್ರಕಟ

  • ಮೀಸಲಾತಿ ಪಟ್ಟಿ ಪ್ರಕಟಿಸಿಲು ಸುಪ್ರೀಂ ಕೋರ್ಟ್‌ನಿಂದ ಆಗಸ್ಟ್ 4ರ ಗಡುವು
  • ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಏಳು ದಿನಗಳ ಕಾಲಾವಕಾಶ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 243 ವಾರ್ಡ್‌ಗಳಿಗೆ ವಾರ್ಡ್‌ವಾರು ಮೀಸಲಾತಿ ನಿಗದಿ ಮಾಡಿರುವ ರಾಜ್ಯ ಸರ್ಕಾರ ಬುಧವಾರ ತಡರಾತ್ರಿ ಕರಡು ಪಟ್ಟಿಯನ್ನು ಪ್ರಕಟಿಸಿ ಅಧಿಸೂಚನೆ ಹೊರಡಿಸಿದೆ.

ಸುಪ್ರೀಂ ಕೋರ್ಟ್ ಆಗಸ್ಟ್ 4 ರೊಳಗೆ ಮೀಸಲಾತಿ ಪಟ್ಟಿ ಬಿಡುಗಡೆ ಮಾಡುವಂತೆ ಸೂಚನೆ ನೀಡಿತ್ತು.

ಸುಪ್ರೀ ಕೋರ್ಟ್‌ ನೀಡಿದ ಸೂಚನೆಯಂತೆ, 2011ರ ಜನಗಣತಿ ಪ್ರಕಾರ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಕುರಿತಂತೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಏಳು ದಿನಗಳ ಕಾಲಾವಕಾಶ ನೀಡಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳ ಪ್ರಾತಿನಿಧ್ಯಕ್ಕೆ ಸಂಬಂಧಿಸಿದಂತೆ ಅಧ್ಯಯನ ಮಾಡಿ ವರದಿ ಸಲ್ಲಿಸಲು ನ್ಯಾ. ಭಕ್ತವತ್ಸಲ ಸಮಿತಿಯನ್ನು ನೇಮಿಸಿತ್ತು. ಈ ಸಮಿತಿಯು ಜುಲೈ 21ರಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.

ವಾರ್ಡ್‌ವಾರು ಮೀಸಲಾತಿ

ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್‌ಗಳನ್ನು 243 ವಾರ್ಡ್‌ಗಳಾಗಿ ಮರುವಿಂಗಡಿಸಲಾಗಿತ್ತು. 243 ಸ್ಥಾನಗಳಲ್ಲಿ 81 ಸ್ಥಾನಗಳನ್ನು ಹಿಂದುಳಿದ ವರ್ಗದ(ಒಬಿಸಿ) ಅಭ್ಯರ್ಥಿಗಳಿಗೆ, 28 ಪರಿಶಿಷ್ಟ ಜಾತಿ(ಎಸ್‌ಸಿ), 4 ಪರಿಶಿಷ್ಟ ಪಂಗಡ(ಎಸ್‌ಟಿ) ಹಾಗೂ 130 ಸ್ಥಾನಗಳನ್ನು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.

ಒಟ್ಟಾರೆಯಾಗಿ 243 ಮೀಸಲು ಸ್ಥಾನಗಳಲ್ಲಿ ಅರ್ಧದಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ.

Image
Image
Image
Image
Image
Image
Image
Image
ನಿಮಗೆ ಏನು ಅನ್ನಿಸ್ತು?
0 ವೋಟ್