ಒಂದು ನಿಮಿಷದ ಓದು | 5,783 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ ವಶಕ್ಕೆ ಪಡೆದ ಬಿಬಿಎಂಪಿ

ಬೆಂಗಳೂರಿನಲ್ಲಿ  ಪ್ಲಾಸ್ಟಿಕ್ ತಯಾರಿಕಾ ಘಟಕಗಳಿಗೆ ದಾಳಿ ನಡೆಸಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾರ್ಷಲ್‌ಗಳು 18 ದಿನಗಳಲ್ಲಿ 5,783 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ. ಅಲ್ಲದೆ, 14.32 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ. 

‘ಸ್ವಚ್ಛ ಹಾಗೂ ಹಸಿರು’ ಕಾರ್ಯಕ್ರಮದಡಿ ಪರಿಸರ ಶುದ್ಧೀಕರಣಕ್ಕೆ ಕೊಡುಗೆ ನೀಡುವಂತೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಸೂಚನೆ ನೀಡಿದೆ. ಆಗಸ್ಟ್‌ 1 ರಿಂದ ಈವರೆಗೂ ಪ್ಲಾಸ್ಟಿಕ್ ವಶಪಡಿಸಿಕೊಂಡ 209 ಪ್ರಕರಣಗಳು ದಾಖಲಾಗಿದೆ.

"ಆಗಸ್ಟ್ 18ರಂದು ದಾಸರಹಳ್ಳಿ ವಲಯ ವ್ಯಾಪ್ತಿಯ ಹೆಗ್ಗನಹಳ್ಳಿಯ ನಿಜಗುಣ ಕಾರ್ಖಾನೆ ಮೇಲೆ ದಾಳಿ ನಡೆಸಿ, 690 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಳ್ಳಲಾದ ಪ್ಲಾಸ್ಟಿಕ್‌ಅನ್ನು ದೊಡ್ಡಬಿದರಕಲ್ಲು ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಸಾಗಿಸಲಾಗಿದೆ" ಎಂದು ಬಿಬಿಎಂಪಿ ಸಿಬ್ಬಂದಿ ತಿಳಿಸಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್
Image
av 930X180