ಬಿಬಿಎಂಪಿ | ಮುಂದಿನ ಚುನಾವಣೆಗೂ ಹಳೆಯ ಮತಗಟ್ಟೆಗಳೇ ಮುಂದುವರೆಯಲಿವೆ

  • ಆಗಸ್ಟ್ 25ರಂದು ಕರಡು ಪಟ್ಟಿ ಪ್ರಕಟಿಸಲು ಸಿದ್ಧತೆ
  • ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆ 198ರಿಂದ 243ಕ್ಕೆ ಏರಿಕೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರಿಗಳು ನಗರದಾದ್ಯಂತ ಮತಗಟ್ಟೆಗಳ ಪರಿಶೀಲನೆಯನ್ನು ನಡೆಸಿದ್ದಾರೆ. ಮತದಾರರ ಕರಡು ಪಟ್ಟಿ ಅಂತಿಮಗೊಳಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಆಗಸ್ಟ್ 25ರಂದು ಕರಡು ಪಟ್ಟಿ ಪ್ರಕಟಿಸಲು ಸಿದ್ಧತೆ ನಡೆಯುತ್ತಿದೆ. ಆದರೆ, ಮತಗಟ್ಟೆಗಳಲ್ಲಿ ಯಾವುದೇ ಬದಲಾವಣೆಯಿಲ್ಲವೆಂದು ಬಿಬಿಎಂಪಿ ಹೇಳಿದೆ.

ಬಿಬಿಎಂಪಿ ವಾರ್ಡ್‌ಗಳ ಮರುವಿಂಗಡಣೆ ಮಾಡಲಾಗಿದ್ದು, ವಾರ್ಡ್‌ಗಳ ಸಂಖ್ಯೆ 198ರಿಂದ 243ಕ್ಕೆ ಏರಿಕೆಯಾಗಿದೆ. ಹಾಗಾಗಿ ಚುನಾವಣೆಗೂ ಮುನ್ನ ಬಿಬಿಎಂಪಿ ಅಧಿಕಾರಿಗಳು ಮತಗಟ್ಟೆ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಬಿಬಿಎಂಪಿ ಅಧಿಕಾರಿಗಳು ಮತಗಟ್ಟೆ ಪಟ್ಟಿ ಮತ್ತು ಮತದಾರ ಪಟ್ಟಿಯನ್ನು ಸಿದ್ಧಪಡಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಪ್ರತಿ ವಾರ್ಡ್‌ಗೂ ಭೇಟಿ ನೀಡಿದ್ದಾರೆ. ಕಂದಾಯ ಅಧಿಕಾರಿಗಳು, ತೆರಿಗೆ ನಿರೀಕ್ಷಕರು ಸೇರಿದಂತೆ ನಾನಾ ವಿಭಾಗಗಳ ಅಧಿಕಾರಿಗಳಿಗೆ ಪಟ್ಟಿ ಸಿದ್ಧಪಡಿಸುವ ಕೆಲಸ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಂಚಾರಕ್ಕೆ ತೆರೆದುಕೊಳ್ಳಲಿದೆ ಶಿವಾನಂದ ವೃತ್ತದ ಮೇಲುರಸ್ತೆ

ಅಲ್ಲದೆ, ಮತದಾರರಲ್ಲಿ ಗೊಂದಲವನ್ನು ತಪ್ಪಿಸಲು, ಪಾಲಿಕೆಯು ಹಳೆಯ ಮತಗಟ್ಟೆಗಳನ್ನೇ ಮುಂದಿನ ಚುನಾವಣೆಗೂ ಬಳಸಲಿದೆ  

'ಕೆಲವು ವಾರ್ಡ್‌ಗಳ ಗಡಿಯನ್ನು ಬದಲಾಯಿಸಲಾಗಿದೆ. ಆದರೂ, ಮತಗಟ್ಟೆಗಳ ಸಂಖ್ಯೆಯಲ್ಲಿ ಯಾವುದೇ ಬದಲಾವಣೆಯಿಲ್ಲ. ಹಳೆಯ ಮತಗಟ್ಟೆ ಸಂಖ್ಯೆಗಳೇ ಇರಲಿವೆ. ಇದರಿಂದ ಸಾರ್ವಜನಿಕರಲ್ಲಿ ಗೊಂದಲ ಉಂಟಾಗದಂತೆ ತಡೆಯಲು ಸಾಧ್ಯವಾಗುತ್ತದೆ ಎನ್ನುವುದು ಬಿಬಿಎಂಪಿಯ ಹಿರಿಯ ಅಧಿಕಾರಿಗಳ ನಂಬಿಕೆ.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app