
- ಸದ್ಯಕ್ಕೆ ಈ ಪ್ರಸ್ತಾವನೆಯನ್ನು ಒಪ್ಪಲು ಸಾಧ್ಯವಿಲ್ಲ
- ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ಕಂಗಾಲು
ಹಾಲಿನ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಸೋಮವಾರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್) ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿರಸ್ಕರಿಸಿದ್ದಾರೆ ಎನ್ನಲಾಗಿದೆ.
ರಾಜ್ಯದ ಜನರು ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮತ್ತೆ ದರ ಹೆಚ್ಚಳ ಮಾಡುವುದು ಸರಿಯಲ್ಲ. ಹೀಗಾಗಿ ಸದ್ಯಕ್ಕೆ ಈ ಪ್ರಸ್ತಾವನೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರಸ್ತುತ ದಿನಗಳಲ್ಲಿ ಲೀಟರ್ಗೆ ₹3ದರ ಹೆಚ್ಚಳ ಮಾಡಿದರೆ ಸಾರ್ವಜನಿಕರಿಗೆ ಹೆಚ್ಚಿನ ಹೊರೆಯಾಗುತ್ತದೆ. ಸರ್ಕಾರ ಪರಿಸ್ಥಿತಿ ನೋಡಿಕೊಂಡು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಒಂದು ನಿಮಿಷದ ಓದು | ಬೆಂಗಳೂರು ನಗರದ ಹಲವೆಡೆ ಭಾರೀ ಮಳೆ, ಸಂಚಾರ ಅಸ್ತವ್ಯಸ್ತ
ಈ ವಿಚಾರವಾಗಿ ಕೆಎಂಎಫ್ ಪರ್ಯಾಯ ಮಾರ್ಗಗಳನ್ನು ಹುಡುಕಿ ಹಾಲು ಉತ್ಪನ್ನಗಳನ್ನು ಮಾರಾಟ ಮಾಡಿ ಮಾರುಕಟ್ಟೆ ವಿಸ್ತರಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್) ಪ್ರತಿ ಲೀಟರ್ ಹಾಲಿನ ದರ ₹3 ಹೆಚ್ಚಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದವು.