ಒಂದು ನಿಮಿಷದ ಓದು | 0-4 ವರ್ಷದ ಮಕ್ಕಳಿಗೆ ರೈಲು ಟಿಕೆಟ್ ಅಗತ್ಯವಿಲ್ಲ; ಭಾರತೀಯ ರೈಲ್ವೆ ಸ್ಪಷ್ಟನೆ

5 ವರ್ಷದ ಒಳಗಿನ ಮಕ್ಕಳು ಟಿಕೆಟ್ ರಹಿತವಾಗಿ ಪ್ರಯಾಣಿಸಿದರೆ ದಂಡ ವಿಧಿಸುವುದಿಲ್ಲ ಎಂದು ಭಾರತೀಯ ರೈಲ್ವೆ ಸ್ಪಷ್ಟಪಡಿಸಿದೆ.

0-4 ವರ್ಷದ ಮಕ್ಕಳಿಗೆ ಟಿಕೆಟ್ ಬುಕ್ ಮಾಡಬೇಕೋ ಬೇಡವೋ ಎಂಬ ಹಲವು ಗೊಂದಲಗಳಿಗೆ ಭಾರತೀಯ ರೈಲ್ವೆ ತೆರೆ ಎಳೆದಿದ್ದು, 5 ವರ್ಷದೊಳಗಿನ ಮಕ್ಕಳು ಉಚಿತವಾಗಿ ರೈಲಿನಲ್ಲಿ ಪ್ರಯಾಣಿಸಬಹುದು ಎಂದು ಸ್ಪಷ್ಟಪಡಿಸಿದೆ. ಒಂದು ವೇಳೆ ಮಕ್ಕಳಿಗೆ ಬರ್ತ್ ಬೇಕು ಅನ್ನಿಸಿದರೆ ಮಾತ್ರ ಪೂರ್ಣ ಟಿಕೆಟ್ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಇಂಡಿಯನ್ ರೈಲ್ವೆ ಕೇಟರಿಂಗ್ ಅಂಡ್ ಟೂರಿಸಮ್ ಕಾರ್ಪೊರೇಷನ್ (ಐಆರ್‌ಸಿಟಿಸಿ) ಮತ್ತು ರೈಲ್ವೆ ಮೀಸಲಾತಿ ಬೂತ್‌ಗಳಲ್ಲಿ ಟಿಕೆಟ್ ಕಾಯ್ದಿರಿಸುವಾಗ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಉಚಿತವಾಗಿ ಸೀಟು ನೀಡುವ ವ್ಯವಸ್ಥೆಯನ್ನು ರೈಲ್ವೆ ಇಲಾಖೆ ಜಾರಿಗೆ ತಂದಿದೆ. 

5 ರಿಂದ 11 ವರ್ಷದೊಳಗಿನ ಮಗುವಿಗೆ ಪೂರ್ಣ ಬರ್ತ್ ತೆಗೆದುಕೊಂಡರೆ ಪೂರ್ಣ ಶುಲ್ಕ ಪಾವತಿಸಬೇಕು. ಬರ್ತ್ ತೆಗೆದುಕೊಳ್ಳದಿದ್ದರೆ ಟಿಕೆಟ್ ದರದ ಅರ್ಧದಷ್ಟು ಮಾತ್ರ ಪಾವತಿಸಬೇಕಾಗುತ್ತದೆ. 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಪೂರ್ಣ ಟಿಕೆಟ್ ಮೊತ್ತವನ್ನು ಪಾವತಿಸಲೇಬೇಕು ಎಂದು ಇಲಾಖೆ ತಿಳಿಸಿದೆ. 

ನಿಮಗೆ ಏನು ಅನ್ನಿಸ್ತು?
0 ವೋಟ್