
- ಮಾರ್ಚ್ನಲ್ಲಿ ಕಾಂಗ್ರೆಸ್ ಸೇರಿದ್ದ ನಿರ್ದೇಶಕ
- 2023ರ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಜಿ
ರಾಜಾಜಿನಗರದ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಕೋರಿ ನಿರ್ದೇಶಕ ಎಸ್ ನಾರಾಯಣ್ ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಆರು ತಿಂಗಳ ಹಿಂದೆಯಷ್ಟೇ ಎಸ್ ನಾರಾಯಣ್ ಕಾಂಗ್ರೆಸ್ ಸೇರದ್ದರು. 2023ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿರುವ ಅವರು, ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಎರಡು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ತೋಡಗಿಸಿಕೊಂಡಿದ್ದ, ಎಸ್ ನಾರಾಯಣ್, ಇದೀಗ ರಾಜಕೀಯದ ಹಾದಿ ಹಿಡಿದಿದ್ದಾರೆ. ಮಾರ್ಚ್ 16ರಂದು ಅವರು ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರು.

ರಾಜಾಜಿನಗರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸುರೇಶ್ ಕುಮಾರ್ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ನಿಂದ ಎಸ್. ನಾರಾಯಣ್ ಸ್ಪರ್ಧಿಸಲು ಅರ್ಜಿ ಸಲ್ಲಿಸಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡುತ್ತದೆಯೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಾಗಿದೆ.