ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ; ಬಿಬಿಎಂಪಿ ಮುಖ್ಯ ಆಯುಕ್ತರನ್ನು ವಜಾಗೊಳಿಸಲು ಕಾಂಗ್ರೆಸ್ ಒತ್ತಾಯ

Congress
  • ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಜಾಗೊಳಿಸಬೇಕು
  • ಪರಿಷ್ಕರಣೆ ಹೆಸರಲ್ಲಿ ಮತದಾನದ ಹಕ್ಕು ಕಸಿಯುತ್ತಿದ್ದಾರೆ

ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮಕ್ಕೆ ಸಂಬಂಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ ಅವರನ್ನು ವಜಾಗೊಳಿಸಲು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಚೇರಿ ಮುಂದೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದರು.

ಈ ಸುದ್ದಿ ಓದಿದ್ದೀರಾ?: ಬೆಂಗಳೂರು | ಹತ್ತು ವರ್ಷಗಳ ಸತತ ಪರಿಶ್ರಮದಿಂದ ಗೂಗಲ್‌ ಕಂಪನಿಯಲ್ಲಿ ಉದ್ಯೋಗ ಪಡೆದ ಟೆಕ್ಕಿ!

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಪ್ರತಿ ಮನೆಗೆ ಭೇಟಿ ನೀಡಿ ಆನ್‌ಲೈನ್ ಅಥವಾ ವೋಟರ್ ಹೆಲ್ಪ್‌ಲೈನ್ ಆಪ್ ಮೂಲಕ ಅರ್ಜಿ ಸಲ್ಲಿಸಲು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯ ನಿರ್ವಹಿಸಲು 'ಚಿಲುಮೆ' ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಪಾಲಿಕೆ ಅನುಮತಿ ನೀಡಿತ್ತು. 

ಆದರೆ, ಸಂಸ್ಥೆಯು ಪತ್ರದಲ್ಲಿ ವಿಧಿಸಿದ್ದ ಷರತ್ತುಗಳನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಸಂಸ್ಥೆಗೆ ನೀಡಿದ್ದ ಅನುಮತಿಯನ್ನು ಪಾಲಿಕೆ ರದ್ದುಪಡಿಸಿದೆ. ಪರಿಷ್ಕರಣೆ ಹೆಸರಲ್ಲಿ ಮತದಾನದ ಹಕ್ಕು ಕಸಿಯುತ್ತಿದ್ದಾರೆ. ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app