ಈದ್ಗಾ ಮೈದಾನದಲ್ಲಿ ಸರ್ಕಾರದ ವತಿಯಿಂದಲೇ ಧ್ವಜಾರೋಹಣ: ಸಚಿವ ಆರ್ ಅಶೋಕ್

  • ಮೈದಾನದಲ್ಲಿ ಉಪವಿಭಾಗಾಧಿಕಾರಿಯಿಂದ ಧ್ವಜಾರೋಹಣ
  • ಮೈದಾನದ ಮಾಲೀಕತ್ವವು ಕಂದಾಯ ಇಲಾಖೆಯದ್ದಾಗಿದೆ

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಆಗಸ್ಟ್ 15ರಂದು ಸರ್ಕಾರದ ವತಿಯಿಂದಲೇ ಧ್ವಜಾರೋಹಣ ನಡೆಯಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ವಿಧಾನಸೌಧಲ್ಲಿ ಸಚಿವ ಆರ್ ಅಶೋಕ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಬಳಿಕ ಮಾತನಾಡಿದ ಅವರು, “ಆಗಸ್ಟ್ 15ರಂದು ಸರ್ಕಾರದ ಪರವಾಗಿ ಉಪವಿಭಾಗಾಧಿಕಾರಿ ಧ್ವಜಾರೋಹಣ ಮಾಡಲಿದ್ದಾರೆ. ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಧ್ವಜಾರೋಹಣ ಸಮಯದಲ್ಲಿ ಧಾರ್ಮಿಕ ಘೋಷಣೆ ಕೂಗುವಂತಿಲ್ಲ. ಬದಲಾಗಿ ರಾಷ್ಟ್ರದ ಕುರಿತ ಘೋಷಣೆ ಕೂಗಲು ಅವಕಾಶವಿದೆ" ಎಂದು ಎಂದಿದ್ದಾರೆ.

“ಯಾವುದೇ ಸಂಘಟಣೆಗಳಾಗಲಿ, ಶಾಸಕ ಜಮೀರ್ ಅಹ್ಮದ್ ಖಾನ್ ಅವರಾಗಲಿ ವೈಯಕ್ತಿಕವಾಗಿ ಯಾರೂ ಧ್ವಜಾರೋಹಣ ನಡೆಸುವಂತಿಲ್ಲ. ಸರ್ಕಾರವೇ ದ್ವಜಾರೋಹಣ ನಡೆಸಲಿದೆ” ಎಂದು ಅವರು ತಿಳಿಸಿದರು. 

“ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದೆ. ಯಾರಿಗೂ ಹಸ್ತಾಂತರ ಮಾಡಿಲ್ಲ. ಧ್ವಜಾರೋಹಣ ದಿನದಂದು ಸ್ಥಳೀಯ ಶಾಸಕರು ಹಾಗೂ ಸಂಸದರನ್ನು ಆಹ್ವಾನಿಸಲಾಗುವುದು ಹಾಗೂ ಪೋಲಿಸ್ ಬಂದೋಬಸ್ತ್ ಮಾಡಲಾಗುವುದು" ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಈದ್ಗಾ ಮೈದಾನದ ವಿವಾದಗಳಿಗೆ ತೆರೆ ಎಳೆಯಲು ಶಾಂತಿಸಭೆ: ಡಿಸಿಪಿ ಲಕ್ಷ್ಮಣ್‌ ನಿಂಬರಗಿ

ಈದ್ಗಾ ಮೈದಾನದಲ್ಲಿ ಕಾನೂನಿನ ಪ್ರಕಾರ ಸಭೆ ಸಮಾರಂಭ 

"ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದೆ. ಅಲ್ಲಿ ಸರ್ಕಾರದ ನೀತಿ ನಿಯಮಗಳ ಪ್ರಕಾರ ಸಭೆ ಸಮಾರಂಭಗಳು, ಉತ್ಸವಗಳನ್ನು ಕೈಗೊಳ್ಳಲಾಗುವುದು" ಎಂದು ಅಶೋಕ್ ಹೇಳಿದರು. "ಯಾರೂ ಏನೇ ಹೇಳಿದರೂ ನಮಗೆ ಕಾನೂನು ಮುಖ್ಯ. ಕಾನೂನು ಬಿಟ್ಟು ಏನೂ ಮಾಡುವುದಿಲ್ಲ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಿಮಗೆ ಏನು ಅನ್ನಿಸ್ತು?
0 ವೋಟ್