ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ | ಬಿಬಿಎಂಪಿಯಿಂದ ಜನಜಾಗೃತಿ ಜಾಥ

  • ಸೊಳ್ಳೆ ನಿಯಂತ್ರಣದಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ಪತ್ರ
  • ಗಾಂಧಿ ಉದ್ಯಾನದಿಂದ ಪಾಲಿಕೆ ಕೇಂದ್ರ ಕಚೇರಿವರೆಗೆ ಜಾಥಾ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ "ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ"ಯ ಕಾರ್ಯಕ್ರಮಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ ರಂದೀಪ್, ಪಾಲಿಕೆ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಾ. ತ್ರಿಲೋಕ್ ಚಂದ್ರ ಸೋಮವಾರ ಚಾಲನೆ ನೀಡಿದರು.

ಸೊಳ್ಳೆ ನಿಯಂತ್ರಣ ಕಾರ್ಯದಲ್ಲಿ ಗಮನಾರ್ಹ ಸಾಧನೆ ಮಾಡಿದ ಮೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಇಬ್ಬರು ಆರೋಗ್ಯ ಕಾರ್ಯಕರ್ತರು ಹಾಗೂ ಐದು ಖಾಸಗಿ ಸಂಸ್ಥೆ, ಆಸ್ಪತ್ರೆ, ಪ್ರಯೋಗಾಲಯಗಳಿಗೆ ಈ ವೇಳೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಭಾರತೀಯ ಸರ್ಕಾರದ ಹಿರಿಯ ಪ್ರಾಂತೀಯ ನಿರ್ದೇಶಕ ಡಾ. ಕೆ ರವಿಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕ ಡಾ. ಎಂ ಇಂದುಮತಿ, ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು. 

ಈ ಸುದ್ದಿ ಓದಿದ್ದೀರಾ? 40% ಕಮಿಷನ್ | ಪ್ರಧಾನಿಗೆ ಪತ್ರ ಬರೆದಿದ್ದ ಗುತ್ತಿಗೆದಾರನ ವಿರುದ್ದ ಪ್ರಕರಣ ದಾಖಲು

ಬೃಹತ್ ಜನಜಾಗೃತಿ ಜಾಥಾ:
"ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ"ಯ ಅಂಗವಾಗಿ ಬೆಂಗಳೂರು ನಗರ ಪ್ರದೇಶದ ಜನರಿಗೆ ಡೆಂಗ್ಯೂ ಸಾಂಕ್ರಾಮಿಕ ರೋಗ ಹರಡುವಿಕೆ ಮತ್ತು ಅದರ ನಿಯಂತ್ರಣ ಬಗ್ಗೆ ಅರಿವು ಮೂಡಿಸಲು ಎಂ ಜಿ ರಸ್ತೆಯ ಗಾಂಧಿ ಉದ್ಯಾನವನದಿಂದ ಪಾಲಿಕೆಯ ಕೇಂದ್ರ ಕಚೇರಿ ಆವರಣದ ವರೆಗೆ ಪಾಲಿಕೆ ವತಿಯಿಂದ “ಬೃಹತ್ ಜನಜಾಗೃತಿ ಜಾಥಾ”  ನಡೆಯಿತು.

ಜಾಥಾದಲ್ಲಿ ಪಾಲಿಕೆಯ ಅಧಿಕಾರಿಗಳು, ವೈದ್ಯರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಮತ್ತು ಸ್ಥಳೀಯ ಸ್ವಯಂ ಸೇವಾ ಸಂಸ್ಥೆ ಪದಾಧಿಕಾರಿಗಳು ಸೇರಿದಂತೆ 800ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

ನಿಮಗೆ ಏನು ಅನ್ನಿಸ್ತು?
0 ವೋಟ್