ಒಂದು ನಿಮಿಷದ ಓದು | ಕೃಷ್ಣ ಜನ್ಮಾಷ್ಟಮಿ ದಿನದಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರಕಟಣೆ ತಿಳಿಸಿದೆ.

ಶುಕ್ರವಾರದಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕ (ಪಶುಪಾಲನೆ) ತಿಳಿಸಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್