ಒಂದು ನಿಮಿಷದ ಓದು| ಬೆಂಗಳೂರು: ನಿಮ್ಮ ಏರಿಯಾದಲ್ಲಿ ಮಂಗಗಳ ಹಾವಳಿಯೇ? ಡಯಲ್ ಮಾಡಿ 1533

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಮಂಗಗಳ ಹಾವಳಿ ಹಾಗೂ ಇತರೆ ವನ್ಯಜೀವಿಗಳಿಂದ ಆಗುವ ತೊಂದರೆಗಳಿಗೆ ಸಾರ್ವಜನಿಕರು ದೂರುಗಳನ್ನು ನೀಡಲು ಟೋಲ್ ಫ್ರೀ ನಂ 1533 ಕರೆ ಮಾಡಬಹುದು ಎಂದು ಬಿಬಿಎಂಪಿ ಪ್ರಕಟಣೆ ಮೂಲಕ ತಿಳಿಸಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಂಗಗಳ ಹಾವಳಿ ಕಂಡುಬಂದ ಸಂದರ್ಭದಲ್ಲಿ ಸಾರ್ವಜನಿಕರು ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಪತ್ರದ ಮೂಲಕ, ದೂರವಾಣಿ ಮೂಲಕ ದೂರುಗಳನ್ನು ನೀಡುತ್ತಿದ್ದರು.

ಕರ್ನಾಟಕ ಉಚ್ಚ ನ್ಯಾಯಾಲಯವು ರಿಟ್ ಪಿಟಿಷನ್ ಸಂಖ್ಯೆ: 5120/2021 ರಂತೆ ವೈಜ್ಞಾನಿಕ ರೀತಿಯಲ್ಲಿ ಪ್ರಾಣಿಹಿಂಸೆ ಆಗದಂತೆ ಮತ್ತು ವನ್ಯಜೀವಿ ಸಂರಕ್ಷಣಾ ಕಾಯಿದೆ 1972 ಮತ್ತು ಪ್ರಾಣಿಹಿಂಸೆ ತಡೆ ಕಾಯಿದೆ 1960 ಉಲ್ಲಂಘನೆ ಆಗದಂತೆ ಹಾಗೂ ಸಾರ್ವಜನಿಕರ ಜೀವಕ್ಕೆ ಹಾನಿಯಾಗದ ರೀತಿಯಲ್ಲಿ ಗಾಯಗೊಂಡ, ರೋಗಗ್ರಸ್ಥ ಹಾಗೂ ಸಾರ್ವಜನಿಕರಿಗೆ ಹಾನಿಯುಂಟುಮಾಡುವಂತಹ ಮಂಗಗಳನ್ನು ರಕ್ಷಣೆ ಮಾಡಿ ಸೂಕ್ತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗುತ್ತದೆ ಎಂದು ಹೇಳಿದೆ.

Image

ನಮ್ಮ ಬೆಂಗಳೂರು ಮೊಬೈಲ್ ಆ್ಯಪ್ ಮೂಲಕ ದೂರುಗಳನ್ನು ಸಲ್ಲಿಸಲು ಬಿಬಿಎಂಪಿ ಪ್ರಕಟಣೆ ಮೂಲಕ ತಿಳಿಸಿದೆ.

ನಿಮಗೆ ಏನು ಅನ್ನಿಸ್ತು?
0 ವೋಟ್