ಒಂದು ನಿಮಿಷದ ಓದು | ಎಸ್‌ ಎಂ ಕೃಷ್ಣ ಆರೋಗ್ಯದಲ್ಲಿ ಚೇತರಿಕೆ

ಕಳೆದ ಮೂರು ದಿನಗಳಿಂದ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ತೀವ್ರ ಜ್ವರ ಹಾಗೂ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಅವರು ಆಸ್ಪತ್ರೆಯಲ್ಲಿ ನಡೆದಾಡುತ್ತಿದ್ದು, ಸ್ವತಃ ಅವರೇ ಅವರ ಆರೋಗ್ಯದ ಕುರಿತು ಆಸ್ಪತ್ರೆಯ ಸಿಬ್ಬಂದಿಯ ಜತೆಗೆ ವಿಚಾರಿಸಿದರು.

ಎಸ್‌ ಎಂ ಕೃಷ್ಣ ಅವರು ಎರಡ್ಮೂರು ದಿನಗಳ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಲಿದ್ದಾರೆ. ಸಂಪೂರ್ಣ ವಿಶ್ರಾಂತಿಗೆ ವೈದ್ಯರು ಸಲಹೆ ನೀಡಿದ್ದಾರೆ.

ನಿಮಗೆ ಏನು ಅನ್ನಿಸ್ತು?
1 ವೋಟ್
Image
av 930X180