
- ನಿರ್ವಹಣಾ ತಂಡ ಪರಿಶೀಲನೆ ನಡೆಸುತ್ತಿದೆ
- 25 ರಿಂದ 30 ನಿಮಿಷಕ್ಕೊಂದು ರೈಲು ಸಂಚರಿಸುತ್ತಿವೆ
‘ನಮ್ಮ ಮೆಟ್ರೋ’ ಸೇವೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೈಸೂರು ರಸ್ತೆ - ಕೆಂಗೇರಿ ಮಾರ್ಗದಲ್ಲಿ ಗುರುವಾರ ರೈಲು ಸಂಚಾರ ವ್ಯತ್ಯಯ ಉಂಟಾಗಿದೆ.
ತಾಂತ್ರಿಕ ತೊಂದರೆಯ ಕಾರಣದಿಂದ ಒಂದೇ ಹಳಿಯಲ್ಲಿ ರೈಲುಗಳು ಸಂಚಾರ ನಡೆಸುತ್ತಿವೆ. 25 ರಿಂದ 30 ನಿಮಿಷಕ್ಕೊಂದು ರೈಲು ಸಂಚರಿಸುತ್ತಿದೆ. ತಾಂತ್ರಿಕ ದೋಷ ಸರಿಪಡಿಸಲು ನಿರ್ವಹಣಾ ತಂಡ ಪರಿಶೀಲನೆ ನಡೆಸುತ್ತಿದ್ದು, ತ್ವರಿತವಾಗಿ ಸಮಸ್ಯೆ ಬಗೆಹರಿಯಲಿದೆ; ಸಹಜವಾಗಿ ರೈಲುಗಳ ಸಂಚಾರ ನಡೆಯಲಿದೆ ಎಂದು ಬಿಎಂಆರ್ಸಿಎಲ್ ಸಂಪರ್ಕಾಧಿಕಾರಿ ಯಶವಂತ ಚವ್ಹಾಣ್ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಂಸ್ಕರಿಸಿದ ಕೊಳಚೆ ನೀರಿಗೆ ಬಿಐಎಸ್ ಮಾನದಂಡ; ಕಟ್ಟಡ ಕಾಮಗಾರಿಗೆ ಬಳಕೆ
ಸದ್ಯ ರೈಲುಗಳು ಬೈಯಪ್ಪನಹಳ್ಳಿ-ಮೈಸೂರು ರಸ್ತೆವರೆಗೂ ಅಡೆತಡೆ ಇಲ್ಲದೇ ಸಂಚಾರ ನಡೆಸುತ್ತಿವೆ. ರೈಲುಗಳಿಗೆ ಹೆಚ್ಚಿನ ಸಮಯ ಕಾಯಬೇಕಾದ ಪರಿಸ್ಥಿತಿ ಉಂಟಾಗಿರುವುದರಿಂದ ಕೆಲಸಕ್ಕೆ ತೆರಳುವವರಿಗೆ ತೊಂದರೆ ಉಂಟಾಗುತ್ತಿದೆ. ಹಾಗಾಗಿ, ಬಸ್ ಮತ್ತು ಖಾಸಗಿ ವಾಹನಗಳ ಮೂಲಕ ಸಂಚರಿಸುತ್ತಿದ್ದಾರೆ.
For kind information to all the Namma metro commuters.
— ನಮ್ಮ ಮೆಟ್ರೋ (@cpronammametro) September 15, 2022
Due to a technical fault, the trains will operate on a single track at 25 to 30 min intervals between Kengeri and Mysore stations .
Maintenance team are at the site for early rectification of the fault .
ಸುಮಾರು ಅರ್ಧ ಗಂಟೆಯಲ್ಲಿ ರೈಲುಗಳ ಸಂಚಾರ ಸಹಜ ಸ್ಥಿತಿಗೆ ಮರಳುವ ನಿರೀಕ್ಷೆ ಇದೆ ಎಂದು ನಮ್ಮ ಮೆಟ್ರೋ ಟ್ವೀಟ್ ಮೂಲಕ ಮಾಹಿತಿ ನೀಡಿದೆ.