- ಬೆಳಗ್ಗೆ 10ರಿಂದ ಸಂಜೆ 4 ರವರೆಗೆ ವಿದ್ಯುತ್ ಕಡಿತ
- ಬಾಕಿ ಉಳಿದ ದುರಸ್ತಿ ಕಾರ್ಯ ಕೈಗೆತ್ತಿಕೊಂಡ ಹಿನ್ನೆಲೆ
ಬೆಂಗಳೂರು ವಿದ್ಯುತ್ ಸರಬರಾಜು ನಿಯಮಿತ ನಿಗಮ (ಬೆಸ್ಕಾಂ) ನಗರದ ಹಲವೆಡೆ ನ.23 ರಿಂದ ನ.24 ರವರೆಗೂ ವಿದ್ಯುತ್ ದುರಸ್ತಿ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಕೆಲವು ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ಮಾರ್ಗ ಸಂಬಂಧಿತ ಕೆಲಸಗಳು ನಡೆಯುತ್ತಿರುವುದರಿಂದ ಬೆಂಗಳೂರಿನ ಕೆಲವು ಭಾಗಗಳಲ್ಲಿ ನಾಲ್ಕು ದಿನ ವಿದ್ಯುತ್ ಕಡಿತವಾಗಲಿದೆ. ಬೆಳಗ್ಗೆ 10ರಿಂದ ಸಂಜೆ 4 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.
ಈ ಸುದ್ದಿ ಓದಿದ್ದೀರಾ?: ಊಟಿಯಾದ ಸಿಲಿಕಾನ್ ವ್ಯಾಲಿ; ಉಣ್ಣೆ ಬಟ್ಟೆಗಳ ಮೊರೆ ಹೋದ ಬೆಂಗಳೂರಿಗರು
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಜಾಲಿ ನಗರ, ಶಿವಾಜಿನಗರ ಭಾಗಗಳಲ್ಲಿ ಬುಧವಾರ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ನ.24 ರಂದು ಮಂಡಿಪೇಟೆ, ಬಿನ್ನಿ ಕಂಪನಿ ರಸ್ತೆ, ಚಾಮರಾಜ್ ಪೇಟೆ ಸರ್ಕಲ್, ಕ್ಲಾಕ್ ಟವರ್ ಮತ್ತು ಮಹಾವೀರ್ ರಸ್ತೆಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ ಎಂದು ಬೆಸ್ಕಾಂ ತಿಳಿಸಿದೆ.