ಒಂದು ನಿಮಿಷದ ಓದು | “ಭಾರತ ಬಿಟ್ಟು ತೊಲಗಿ ದಿನ”; ಗಾಂಧಿ ಪ್ರತಿಮೆಗೆ ಮಾಲಾರ್ಪಣೆ

"ಭಾರತ ಬಿಟ್ಟು ತೊಲಗಿ" ದಿನದ ಅಂಗವಾಗಿ ಬೆಂಗಳೂರು ನಗರದ ಎಂ ಜಿ ರಸ್ತೆಯಲ್ಲಿನ ಮಹಾತ್ಮಗಾಂಧಿ ಉದ್ಯಾನದಲ್ಲಿರುವ ಗಾಂಧಿ ಪ್ರತಿಮೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವತಿಯಿಂದ ಮಾಲಾರ್ಪಣೆ ಹಾಗೂ ಪುಷ್ಪ ನಮನ ಸಲ್ಲಿಸಲಾಯಿತು.

ಪಾಲಿಕೆಯ ಆಡಳಿತಗಾರ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪನಮನ ಸಲ್ಲಿಸಿದರು. ಬಳಿಕ ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಈ ವೇಳೆ ವಿಶೇಷ ಆಯುಕ್ತರಾದ ರವೀಂದ್ರ, ಡಾ. ಹರೀಶ್ ಕುಮಾರ್, ಜಯರಾಮ ರಾಯಪುರ, ಮಾಜಿ ಮಹಾಪೌರರು ಹಾಗೂ ಇನ್ನಿತರೆ ಗಣ್ಯರು ಹಾಜರಿದ್ದರು.

ನಿಮಗೆ ಏನು ಅನ್ನಿಸ್ತು?
0 ವೋಟ್