ಒಂದು ನಿಮಿಷದ ಓದು | ಗಾಂಧಿ ಜಯಂತಿಯಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ

ಅಕ್ಟೋಬರ್ 2ರಂದು ಗಾಂಧಿ ಜಯಂತಿ ಹಿನ್ನೆಲೆ, ಬೆಂಗಳೂರಿನಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಅಕ್ಟೋಬರ್ 2ರಂದು ಗಾಂಧಿ ಜಯಂತಿ ಇರುವುದರಿಂದ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಜಂಟಿ ನಿರ್ದೇಶಕರು (ಪಶುಪಾಲನೆ) ತಿಳಿಸಿದ್ದಾರೆ.

ಅಹಿಂಸೆ ಮತ್ತು ಶಾಂತಿಯ ಆದರ್ಶಗಳಿಗಾಗಿ ಸ್ಮರಣೀಯರಾದ ಮಹಾತ್ಮ ಗಾಂಧಿಯವರ 153ನೇ ಜನ್ಮದಿನವನ್ನು ಭಾನುವಾರ ದೇಶದಾದ್ಯಂತ ಆಚರಿಸಲಾಗುತ್ತದೆ.

Image
ನಿಮಗೆ ಏನು ಅನ್ನಿಸ್ತು?
0 ವೋಟ್
Image
av 930X180