ಒಂದು ನಿಮಿಷದ ಓದು| ಹದಿನೈದು ದಿನಗಳಿಂದ ಇಲ್ಲಿಯವರೆಗೂ 5000ಮೀ ರಾಜಕಾಲುವೆ ಒತ್ತುವರಿ ತೆರವುಗೊಳಿಸಿದ ಬಿಬಿಎಂಪಿ

ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಹದೇವಪುರ ವಲಯದಲ್ಲಿ ಕಳೆದ ಹದಿನೈದು ದಿನಗಳಿಂದ ಇಲ್ಲಿಯವರೆಗೂ ಕೇವಲ 5,000 ಮೀಟರ್ ಒತ್ತುವರಿ ತೆರವುಗೊಳಿಸಿದೆ. 

ಕಂದಾಯ ಇಲಾಖೆಯ ದಾಖಲೆಗಳನ್ನು ಬಳಸಿಕೊಂಡು ಎಲ್ಲೆಲ್ಲಿ ರಾಜಕಾಲುವೆ ಒತ್ತುವರಿಯಾಗಿದೆ ಎಂಬ ಬಗ್ಗೆ ಪಟ್ಟಿ ಸಿದ್ಧಪಡಿಸಲಾಗಿದೆ. ಮಹದೇವಪುರ ವಲಯದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಎಂಜಿನಿಯರ್ ಲೋಕೇಶ್ ಹೇಳಿದರು.

ನಗರದ ಮಹದೇವಪುರ ವಲಯದ ದೊಡ್ಡನೆಕ್ಕುಂದಿ, ಪಣತೂರು, ಹೂಡಿ, ವರ್ತೂರ್, ಕುಂದಲಹಳ್ಳಿ, ಮುನ್ನೇಕೊಳಲು ಮತ್ತು ಕಾಸವನಹಳ್ಳಿಯಲ್ಲಿ ರಾಜಕಾಲುವೆ ಒತ್ತುವರಿಯಾಗಿದೆ. ಬಿಬಿಎಂಪಿ ಅಧಿಕಾರಿಗಳು ರಾಜಕಾಲುವೆ ಒತ್ತುವರಿಯಾಗಿರುವಲ್ಲಿ ಸರ್ವೇ ನಡೆಸಿ ಮಾರ್ಕಿಂಗ್ ಮಾಡಿದ್ದಾರೆ. ಜಾಗ ಗುರುತಿಸಿದ ಕಡೆಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದರು.

ನಿಮಗೆ ಏನು ಅನ್ನಿಸ್ತು?
0 ವೋಟ್
Image
av 930X180