ಒಂದು ನಿಮಿಷದ ಓದು | ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಕೈಮಗ್ಗ ಮತ್ತು ಜವಳಿ ಇಲಾಖೆಯ ನೇತೃತ್ವದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ 8ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

ಆಗಸ್ಟ್ 5 ರಿಂದ 7ರವರೆಗೆ ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್‌ನಲ್ಲಿ ಮೇಳ ನಡೆಯಲಿದ್ದು, ಆಗಸ್ಟ್ 5ರಂದು ಬೆಳಗ್ಗೆ 11.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೇಳವನ್ನು ಉದ್ಘಾಟಿಸಲಿದ್ದಾರೆ. ಕೈಮಗ್ಗ ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನವು ಬೆಳಗ್ಗೆ 11ರಿಂದ ಸಂಜೆ 7.30ರವರೆಗೆ ನಡೆಯಲಿದೆ.

ಆಗಸ್ಟ್ 7ರಂದು ಬೆಳಿಗ್ಗೆ 11.30ಕ್ಕೆ ಜವಳಿ ಸಚಿವ ಶಂಕರ್ ಬಿ ಪಾಟೀಲ್ ಮುನೇನಕೊಪ್ಪ ಅವರು 8ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಹಾಗೂ ನೇಕಾರರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಲಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್