ಒಂದು ನಿಮಿಷದ ಓದು| ವಾರ್ಡ್‌ಗೊಂದು ಗಣೇಶ ನಿರ್ಧಾರ ಅಂತಿಮವಾಗಿಲ್ಲ: ಬಿಬಿಎಂಪಿ ಸ್ಪಷ್ಟನೆ

ಬೆಂಗಳೂರಿನಲ್ಲಿ ವಾರ್ಡ್‌ಗೊಂದು ಗಣೇಶ ಕೂರಿಸುವ ವಿಚಾರದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ತುಷಾರ್ ಗಿರಿನಾಥ್ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, "ಮಾಧ್ಯಮಗಳಲ್ಲಿ ದಾಖಲಾಗಿರುವ ಹೇಳಿಕೆ ಸಾರ್ವಜನಿಕರಿಗೆ ಗೊಂದಲ ಮೂಡಿಸುತ್ತಿದೆ. ಈ ಬಗ್ಗೆ ನಾವಿನ್ನೂ ಸ್ಪಷ್ಟ ನಿರ್ಧಾರ ಪ್ರಕಟಿಸಿಲ್ಲ" ಎಂದು ಸ್ಪಷ್ಟನೆ ನೀಡಿದ್ದಾರೆ.

"ರಾಜ್ಯ ಸರ್ಕಾರ ನೀಡುವ ಅದೇಶವನ್ನು ಬಿಬಿಎಂಪಿ ಪಾಲಿಸಲಿದೆ. ಈ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುನ್ನಡೆಯಲಾಗುವುದು" ಎಂದು ಅವರು ಹೇಳಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್