ಒಂದು ನಿಮಿಷದ ಓದು | ಸೋಮವಾರ ಮುಂಜಾನೆಯೇ ಶುರುವಾದ ಜೋರು ಮಳೆ

ಬೆಂಗಳೂರಿನಲ್ಲಿ ಸತತವಾಗಿ ಒಂದು ವಾರದಿಂದ ಮಳೆಯಾಗುತ್ತಿದ್ದು, ಸೋಮವಾರ ಬೆಳಿಗ್ಗೆಯಿಂದಲೇ ನಗರದ ಎಲ್ಲೆಡೆ ಜೋರು ಮಳೆ ಶುರುವಾಗಿದೆ.

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ ಹವಾಮಾನ ಇಲಾಖೆ 'ಯೆಲ್ಲೋ ಅಲರ್ಟ್' ಘೋಷಿಸಿದೆ.

ಬೆಂಗಳೂರಿನಲ್ಲಿ ವಾಡಿಕೆಯಂತೆ ಜನವರಿಯಿಂದ ಆಗಸ್ಟ್‌ವರೆಗೆ 34.4 ಸೆಂ.ಮೀ ಮಳೆಯಾಗಬೇಕಿತ್ತು. ಆದರೆ, ಈ ವರ್ಷ 76.1ಸೆಂ.ಮೀ ನಷ್ಟು ಮಳೆಯಾಗಿದೆ. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಜೋರು ಮಳೆ ಸುರಿಯುತ್ತಿದೆ.

ಎಲ್ಲೆಲ್ಲಿ ಮಳೆ

ವಿಜಯನಗರ, ಗೋವಿಂದರಾಜನಗರ, ಮಲ್ಲೇಶ್ವರಂ, ಶ್ರೀರಾಮ್‌ಪುರ, ಶಿವಾಜಿನಗರ, ರಾಜಾಜಿನಗರ, ಕೆ ಆರ್ ಪುರಂ, ಕೆ ಆರ್ ಮಾರುಕಟ್ಟೆ ಸೇರಿದಂತೆ ನಗರದ ನಾನಾ ಕಡೆ ಜೋರು ಮಳೆ ಸುರಿಯುತ್ತಿದೆ.

ನಗರದ ಕೆಲವು ಅಂಡರ್ ಪಾಸ್‌ಗಳು, ರಸ್ತೆಗುಂಡಿಗಳಲ್ಲಿ ನೀರು ತುಂಬಿಕೊಂಡ ಕಾರಣ ವಾಹನ ಸವಾರರ ಸಂಚಾರಕ್ಕೆ ಸಮಸ್ಯೆ ಉಂಟಾಯಿತು. ಸುರಿಯುತ್ತಿರುವ ಜೋರು ಮಳೆಯಿಂದ ಪ್ರತಿದಿನ ಬೆಳಿಗ್ಗೆ ಕೆಲಸಕ್ಕೆ ತೆರಳುವವರು ಪರದಾಡುವಂತಾಗಿದೆ.

ನಿಮಗೆ ಏನು ಅನ್ನಿಸ್ತು?
0 ವೋಟ್