ಒಂದು ನಿಮಿಷದ ಓದು | ಮಂತ್ರಿ ಸ್ಕ್ವೇರ್ ಮೆಟ್ರೋ ನಿಲ್ದಾಣಕ್ಕೆ ನಾರಾಯಣ ಗುರು ಹೆಸರು

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಂತ್ರಿ ಸ್ಕ್ವೇರ್ ಮೆಟ್ರೋ ನಿಲ್ದಾಣಕ್ಕೆ ಸಮಾಜ ಸುಧಾರಕ ನಾರಾಯಣ ಗುರುಗಳ ಹೆಸರಿಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘ ಆಯೋಜಿಸಿದ್ದ ನಾರಾಯಣ ಗುರುಗಳ 168ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಂತ್ರಿ ಸ್ಕ್ವೇರ್ ಮೆಟ್ರೋ ನಿಲ್ದಾಣಕ್ಕೆ ನಾರಾಯಣ ಗುರುಗಳ ಹೆಸರನ್ನು ನಾಮಕರಣ ಮಾಡಲಾಗುವುದು” ಎಂದು ಹೇಳಿದ್ದಾರೆ.

“ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ ಬಿಡಿಎ ಮಂಜೂರು ಮಾಡಿರುವ 1,000 ಚ.ಮೀ. ಜಾಗದಲ್ಲಿ ನಾರಾಯಣ ಗುರು ಹೆಸರಿನಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲಾಗುವುದು. ಅದಕ್ಕಾಗಿ, ಎರಡು ಕಂತಿನಲ್ಲಿ ₹5 ಕೋಟಿ ಹಣವನ್ನು ಸರ್ಕಾರದಿಂದ ಮಂಜೂರು ಮಾಡಲಾಗುವುದು” ಎಂದು ಭರವಸೆ ನೀಡಿದ್ದಾರೆ.

AV Eye Hospital ad

“ನಾರಾಯಣ ಗುರು ಹೆಸರಿನಲ್ಲಿರುವ 4 ವಸತಿ ಶಾಲೆಗಳಿಗೆ ತಲಾ ₹25 ರಿಂದ ₹30 ಕೋಟಿ ಅನುದಾನ ನೀಡಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ಮಂತ್ರಿಸ್ಕ್ವೇರ್ ಮೆಟ್ರೋ ನಿಲ್ದಾಣಕ್ಕೆ ನಾರಾಯಣ ಗುರುಗಳ ಹೆಸರನ್ನು ನಾಮಕರಣ ಮಾಡಿದ್ದಕ್ಕೆ ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ಸಮಾಜ ಕಲ್ಯಾಣ ಖಾತೆಯ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಟ್ವಿಟರ್‌ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app