ಒಂದು ನಿಮಿಷದ ಓದು | ಬೆಂಗಳೂರಿನಲ್ಲಿ ಶನಿವಾರ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಶನಿವಾರ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶುಕ್ರವಾರ ಸಂಜೆಯಿಂದ ನಗರದಲ್ಲಿ ಜಿಟಿ ಜಿಟಿ ಮಳೆ ಶುರುವಾಗಿದ್ದು, ಚಳಿಯ ವಾತಾವರಣ ಇದೆ.

Eedina App

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಹಲವೆಡೆ ಮಳೆಯಾಗುತ್ತಿದೆ. ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

AV Eye Hospital ad

ಶುಕ್ರವಾರ ಬೆಂಗಳೂರಿನ ಮೆಜಸ್ಟಿಕ್, ಕಾರ್ಪೋರೇಷನ್, ವಿಧಾನಸೌಧ, ಚಂದ್ರಾ ಲೇಔಟ್, ಆರ್ ಟಿ ನಗರ, ವಿಜಯನಗರ, ಗೋವಿಂದರಾಜನಗರ ಸೇರಿದಂತೆ ಹಲವೆಡೆ ರಾತ್ರಿ ಶುರುವಾದ ಜಿಟಿ ಜಿಟಿ ಮಳೆ ಶನಿವಾರ ಬೆಳಿಗ್ಗೆವರೆಗೂ ಸುರಿದಿದೆ.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app