ಒಂದು ನಿಮಿಷದ ಓದು| ಒಂದು ವಾರ್ಡ್‌ಗೆ ಒಂದೇ ಗಣೇಶ ಕೂರಿಸಬೇಕು: ತುಷಾರ್ ಗಿರಿನಾಥ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಒಂದು ವಾರ್ಡ್‌ಗೆ ಒಂದೇ ಗಣೇಶ ಕೂರಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಆಗಸ್ಟ್ ಕೊನೆಯ ವಾರದಲ್ಲಿ ಗೌರಿ ಗಣೇಶ ಹಬ್ಬ ಬರಲಿದ್ದು, ಈ ಕುರಿತಂತೆ ಹಬ್ಬದ ಸಂಭ್ರಮಾಚರಣೆಯ ಬಗ್ಗೆ ಮುಖ್ಯ ಆಯುಕ್ತರು ಕೆಲವು ನಿಯಮಗಳನ್ನು ಹೇರಿದ್ದಾರೆ.

“ಪ್ರತಿ ವರ್ಷದಂತೆ ಈ ವರ್ಷವೂ ಒಂದು ವಾರ್ಡ್‌ಗೆ ಒಂದೇ ಗಣೇಶ ಕೂರಿಸಬೇಕು. ಕಳೆದ ವರ್ಷದ ನಿಯಮಗಳೇ ಈ ಬಾರಿಯೂ ಜಾರಿಯಾಗಲಿವೆ. ಪಿಒಪಿ ಗಣೇಶವನ್ನು ಕೂರಿಸುವಂತಿಲ್ಲ. ಪಿಒಪಿ ಗಣೇಶ ಮೂರ್ತಿ ತಯಾರಿಸಿ, ಮಾರಾಟ ಮಾಡಬಾರದು. ಪಿಒಪಿ ಗಣೇಶ ತಯಾರಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಒಂದು ವೇಳೆ ಪಿಒಪಿ ಮೂರ್ತಿಗಳನ್ನ ಮಾರಿದರೆ ಮಾಲಿನ್ಯ ನಿಯಂತ್ರಣ ಮಂಡಳಿ ಜೊತೆ ಸೇರಿ ದಾಳಿ ಮಾಡಿ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಅವರು ಎಚ್ಚರಿಸಿದರು. 

ನಿಮಗೆ ಏನು ಅನ್ನಿಸ್ತು?
0 ವೋಟ್