ಸುಪ್ರೀಂಕೋರ್ಟ್ ಸೂಚನೆಯಂತೆ ಬಿಬಿಎಂಪಿ ಚುನಾವಣೆಗೆ ಸಿದ್ಧ; ಸಿಎಂ ಬೊಮ್ಮಾಯಿ ಘೋಷಣೆ

  • ಚುನಾವಣೆ ನಡೆಸಲು ಸೂಚಿಸಿದ ತೀರ್ಪಿಗೆ ಸ್ವಾಗತ
  • ಚುನಾವಣಾ ಪ್ರಕ್ರಿಯೆ ಪ್ರಾರಂಭಿಸಲು ಸಮಿತಿ ರಚನೆ

“ಎಂಟು ವಾರಗಳ ಒಳಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಚುನಾವಣೆ ಎದುರಿಸಲು ಸರ್ಕಾರ ಸಿದ್ಧವಿದೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

“ಸುಪ್ರೀಂಕೋರ್ಟ್ ಎಂಟು ವಾರಗಳಲ್ಲಿ ಚುನಾವಣೆ ಪ್ರಕ್ರಿಯೆ ಮುಗಿಸಲು ಸೂಚಿಸಿದೆ. ಚುನಾವಣೆ ನಡೆಸಲು ಸೂಚಿಸಿದ ಈ ತೀರ್ಪುನ್ನು ನಾವು ಸ್ವಾಗತಿಸುತ್ತೇವೆ. ಸಂಬಂಧಿಸಿದ ಡಿ ಲಿಮಿಟೇಷನ್ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ” ಎಂದು ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗಾರಿಗೆ ಪ್ರತಿಕ್ರಿಯೆ ನೀಡಿದರು.

“ಎಂಟು ವಾರದಲ್ಲಿ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗಲಿದೆ. ಈ ಸಂಬಂಧ ಸಮಿತಿ ಕೂಡ ರಚನೆ ಮಾಡಿದ್ದೇವೆ. ಸಾಧ್ಯವಾದಷ್ಟು ಬೇಗ ಚುನಾವಣೆ ನಡೆಸುತ್ತೇವೆ. ಹಿಂದಿನ ಆದೇಶದಲ್ಲಿ ಮೀಸಲಾತಿ ಇಲ್ಲ ಎಂದು ತೀರ್ಪು ನೀಡಿತ್ತು. ನಂತರ ಇತರೆ ಹಿಂದುಳಿದ ವರ್ಗ(ಒಬಿಸಿ) ಮೀಸಲಾತಿ ಸಹಿತ ಚುನಾವಣೆ ನಡೆಸಲು ಸೂಚನೆ ನೀಡಿತ್ತು. ನಾವು ಕೂಡ ಒಬಿಸಿ ಮೀಸಲಾತಿ ಇಲ್ಲದೆ ಚುನಾವಣೆ ನಡೆಸುವುದಿಲ್ಲ ಎಂದು ಹೇಳಿದ್ದೆವು. ಈಗ ನಮ್ಮ ಮನ್ನಣೆಯಂತೆ ಒಬಿಸಿ ಮೀಸಲಾತಿಯೊಂದಿಗೆ ಚುನಾವಣೆ ನಡೆಸಲು ಅನುಮತಿ ದೊರೆತಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಳ್ತಂಗಡಿ | ಶಾಸಕ ಹರೀಶ್ ಪೂಂಜಾಗೆ ಮುಳುವಾದ ಪಕ್ಷದ ಕಾರ್ಯಕರ್ತನ ಹೊಗಳಿಕೆಯ ಭಾಷಣ! 

ಮತ್ತೆ ಕಾಲಾವಕಾಶ ಕೇಳುತ್ತೀರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಕೋರ್ಟ್ ತೀರ್ಪುನ್ನು ಪಾಲಿಸಬೇಕು. ನಾವು ಚುನಾವಣೆಗೆ ಸಿದ್ಧರಿದ್ದೇವೆ” ಎಂದು ತಿಳಿಸಿದರು.

ಸಾಕಷ್ಟು ಕುತೂಹಲಕ್ಕೆ ಕಾರಣವಾಗಿರುವ ಬಿಬಿಎಂಪಿ ಚುನಾವಣಾ ಪ್ರಕ್ರಿಯೆಯನ್ನು ಎಂಟು ವಾರಗಳಲ್ಲಿ ಆರಂಭಿಸಿ ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ವಾರ್ಡ್ ಪುನರ್ವಿಂಗಡನೆ ಹಾಗೂ ಮೀಸಲಾತಿ ಕಾರಣದಿಂದ ಪದೇಪದೆ ಮುಂದೂಡಲ್ಪಡುತ್ತಿರುವ ಬಿಬಿಎಂಪಿ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದೆ.

ಬಿಜೆಪಿ ಅಧಿಕಾರದ ಚುಕ್ಕಾಣೆ ಹಿಡಿಯಲಿದೆ: ಆರ್ ಅಶೋಕ್ ವಿಶ್ವಾಸ
“ಬಿಬಿಎಂಪಿ ಚುನಾವಣೆ ನಡೆಸಲು ನಮ್ಮ ಸರ್ಕಾರ ಮತ್ತು ಪಕ್ಷ ಸಿದ್ಧವಾಗಿದೆ. ಮೀಸಲಾತಿ ನಿಗದಿ ಮಾಡಲು ನ್ಯಾಯಾಲಯ ಎಂಟು ವಾರ ಕಾಲಮಿತಿ ನೀಡಿದೆ. ಸುಪ್ರೀಂ ಆದೇಶಕ್ಕೆ ಸರ್ಕಾರ ಬದ್ಧವಾಗಿದೆ” ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದರು.

ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, “ಬಿಬಿಎಂಪಿ ಚುನಾವಣೆಗೆ ನಮ್ಮ ಪಕ್ಷ ಈಗಾಗಲೇ ಸಿದ್ಧತೆ ಮಾಡಿಕೊಂಡಿದೆ. ಪಕ್ಷದ ಸಂಘಟನೆ ಭದ್ರವಾಗಿದ್ದು, ಈ ಬಾರಿ ಬಿಜೆಪಿ ಭಾರಿ ಬಹುಮತದೊಂದಿದೆ ಬಿಬಿಎಂಪಿಯಲ್ಲಿ ಅಧಿಕಾರದ ಚುಕ್ಕಾಣೆ ಹಿಡಿಯಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಈಗಾಗಲೇ ವಾರ್ಡ್ ಮಟ್ಟದಲ್ಲಿ ಸಭೆ, ಚುನಾವಣಾ ಕಾರ್ಯತಂತ್ರ, ಜನರ ಸಮಸ್ಯೆಗೆ ಪರಿಹಾರ ನೀಡುವ ನಿಟ್ಟಿನಲ್ಲಿ ನೀಲ ನಕ್ಷೆ ಸಿದ್ಧಪಡಿಸಿದ್ದೇವೆ. ರಾಜ್ಯ ಸರ್ಕಾರದ ಸಾಧನೆ ಮತ್ತು ನಮ್ಮ ಪಕ್ಷದ ಗಟ್ಟಿ ಸಂಘಟನೆ ಒಂದುಗೂಡಿ ಬಿಬಿಎಂಪಿ ಚುನಾವಣೆಯಲ್ಲಿ ಭರ್ಜರಿ ಗೆಲುವು ಪಡೆದು, ಬೆಂಗಳೂರು ಮಹಾನಗರದ ಜನತೆಯ ಕೂಗಿಗೆ ನಾವು ದನಿಯಾಗಲಿದ್ದೇವೆ” ಎಂದರು.

ನಿಮಗೆ ಏನು ಅನ್ನಿಸ್ತು?
0 ವೋಟ್