
- ನ.23ರಂದು ಕೆ ಆರ್ ಪುರಂನಲ್ಲಿ ಬಿಎಂಟಿಸಿ ಬಸ್ನಿಂದ ಬಾಲಕಿ ಮೃತಪಟ್ಟಿದ್ದಳು
- ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು; ತನಿಖೆ ಮುಂದುವರೆದಿದೆ
ಬಿಎಂಟಿಸಿ ಬಸ್ ಮತ್ತು ದ್ವಿ ಚಕ್ರವಾಹನ ಡಿಕ್ಕಿಯಾಗಿ ಇಬ್ಬರು ವಾಹಹನ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ದುರ್ದೈವಿ ಮಂಜುನಾಥ್ (25) ಮತ್ತು ಶಿವರಾಜ್(29), ಗೊಲ್ಲರಹಟ್ಟಿಯ ಇಂದಿರಾ ಕಾಲೋನಿ ನಿವಾಸಿಗಳು ಎಂದು ತಿಳಿದು ಬಂದಿದೆ. ಬೆಂಗಳೂರಿನ ಮಾಗಡಿ ರಸ್ತೆ ಜಂಕ್ಷನ್ ಬಳಿ ಇಬ್ಬರು ತೆರಳುತ್ತಿರುವಾಗ ಬಿಎಂಟಿಸಿ ಬಸ್ಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ತಾವರೆಕೆರೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣದ ಕುರಿತು ತನಿಖೆಯಾಗುತ್ತಿದೆ. ಈ ಸಂಬಂಧ ದೂರು ದಾಖಲಾಗಿದೆ ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ?: ಚಿಲುಮೆ ವೋಟರ್ ಗೇಟ್ | ನಿರೀಕ್ಷಣಾ ಜಾಮೀನು ಪಡೆಯಲು ಮುಂದಾದ 30 ಬಿಬಿಎಂಪಿ ಕಂದಾಯ ಅಧಿಕಾರಿಗಳು
ಒಂದೇ ತಿಂಗಳಲ್ಲಿ ಬಿಎಂಟಿಸಿ ಬಸ್ನಿಂದ ಎರಡು ಅಪಘಾತ
ಕಳೆದ ವಾರವಷ್ಟೇ ಬಿಎಂಟಿಸಿ ಬಸ್ನಿಂದಾಗಿ ಮೃತಪಟ್ಟಿರುವ ಘಟನೆ ನಡೆದ ಬೆನ್ನಲೇ ಇದೀಗ ಮತ್ತೊಂದು ಅಪಘಾತ ಸಂಭವಿಸಿದೆ. ನ.23ರಂದು ಕೆ ಆರ್ ಪುರಂನ ಹಳೆ ಮದ್ರಾಸ್ ರಸ್ತೆಯಲ್ಲಿ, ವೇಗವಾಗಿ ಬಂದ ಬಿಎಂಟಿಸಿ ಬಸ್ ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಲಯಶ್ರೀ ಎಂಬ 16 ವರ್ಷದ ಬಾಲಕಿ ಮೃತಪಟ್ಟಿದ್ದಳು.
ನ. 7 ರಂದು ಯೋಧರೊಬ್ಬರು ಸಂಜೆ ಕಾಮಾಕ್ಷಿಪಾಳ್ಯದಲ್ಲಿ ಕಾರಿನಲ್ಲಿ ಸಂಚರಿಸುವಾಗ, ಬಿಎಂಟಿಸಿ ಮತ್ತು ಕಾರು ಡಿಕ್ಕಿ ಹೊಡೆದು ಯಲಹಂಕದ ಬಳಿಯ ಕಮಾಂಡೋ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನ.17ರಂದು ಮೃತಪಟ್ಟಿದ್ದರು.