ಸಿಡಿಲು ಬಡಿದು ಬಾಲಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಸಾಣೂರು ಪದವು ಎಂಬಲ್ಲಿ ನಡೆದಿದೆ.
ಸಾಣೂರುಪದವು ಗ್ರಾಮದ ಕಾರ್ತಿಕ್ (16) ಮೃತಪಟ್ಟ ದುರ್ದೈವಿ. ನಿನ್ನೆ ರಾತ್ರಿ 9ರ ಸುಮಾರಿಗೆ ಊಟ ಮುಗಿಸಿ ಮಲಗಿದ್ದ ವೇಳೆ ಸಿಡಿಲು ಬಡಿದು ಕಾರ್ತಿಕ್ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಪ್ರಜ್ಞಾಹೀನನಾಗಿದ್ದ ಕಾರ್ತಿಕ್ನನ್ನು ತಕ್ಷಣವೇ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು ಕಾರ್ತಿಕ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಘಟನೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.