ಬಸ್ ಅಪಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿ ಕುಟುಂಬಕ್ಕೆ ₹4 ಲಕ್ಷ ಪರಿಹಾರ: ಬೆಂಗಳೂರು ವಿಶ್ವವಿದ್ಯಾಲಯ

Date:

  • ಗಣಿತ ವಿಭಾಗಕ್ಕೆ ತೆರಳಲು ಬಿಎಂಟಿಸಿ ಬಸ್ ಸಲುವಾಗಿ ಕಾಯುತ್ತಿದ್ದ ವಿದ್ಯಾರ್ಥಿನಿ
  • ಜೀವನ್ಮರಣ ಹೋರಾಟ ನಡೆಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿ ಶಿಲ್ಪಶ್ರೀ

ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗೆ ಸಿಲುಕಿ ಸಾವನ್ನಪ್ಪಿದ ಸ್ನಾತಕೋತ್ತರ ವಿದ್ಯಾರ್ಥಿನಿ ಶಿಲ್ಪಶ್ರೀ ಕುಟುಂಬಕ್ಕೆ ₹4 ಲಕ್ಷ ಪರಿಹಾರ ನೀಡಲು ಬೆಂಗಳೂರು ವಿಶ್ವವಿದ್ಯಾಲಯ (ಬಿಯು) ನಿರ್ಧರಿಸಿದೆ.

ಕ್ಯಾಂಪಸ್‌ನಲ್ಲಿರುವ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ ಶಿಲ್ಪಶ್ರೀ (22) ಅವರು 2022ರ ಅಕ್ಟೋಬರ್‌ನಲ್ಲಿ ಗಣಿತ ವಿಭಾಗಕ್ಕೆ ತೆರಳಲು ಬಿಎಂಟಿಸಿ ಬಸ್ ಸಲುವಾಗಿ ಕಾಯುತ್ತಿದ್ದರು. ಈ ವೇಳೆ, ಬಸ್‌ ಹತ್ತುವಾಗ ಕೆಳಗೆ ಬಿದ್ದ ಶಿಲ್ಪಶ್ರೀ ಮೇಲೆ ಬಸ್‌ ಹರಿದಿತ್ತು. ಬಳಿಕ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿ ಕೊನೆಯುಸಿರೆಳೆದಿದ್ದರು.

ವಿಶ್ವವಿದ್ಯಾನಿಲಯವು ಆಕೆಯ ವೈದ್ಯಕೀಯ ವೆಚ್ಚವನ್ನು ಭರಿಸಿದೆ. ಸಂತ್ರಸ್ತೆಯ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಹಣಕಾಸಿನ ನೆರವು ಕೋರಿದೆ. ಒಂಬತ್ತು ತಿಂಗಳ ಬಳಿಕ ಜೂ.12ರಂದು ನಡೆದ ಸಿಂಡಿಕೇಟ್ ಸಭೆಯಲ್ಲಿ ಶಿಲ್ಪಶ್ರೀ ಕುಟುಂಬಕ್ಕೆ ₹4 ಲಕ್ಷ ಪರಿಹಾರ ನೀಡಲು ತೀರ್ಮಾನಿಸಲಾಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಘಟನೆಯ ನಂತರ 2023-24ರ ಬಜೆಟ್‌ನಲ್ಲಿ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಅಪಘಾತಗಳು ಸಂಭವಿಸಿದಾಗ ವಿದ್ಯಾರ್ಥಿಗಳ ಅಪಘಾತ ವೆಚ್ಚ ಭರಿಸಲು ವಿಶ್ವವಿದ್ಯಾಲಯವು ₹5 ಲಕ್ಷ ನಿಧಿಯನ್ನು ಮೀಸಲಿಟ್ಟಿದೆ. ತಕ್ಷಣದ ಚಿಕಿತ್ಸೆಗೆ ಮೀಸಲಿಟ್ಟಿರುವ ಹಣವನ್ನು ಬಳಸಲು ವಿಶ್ವವಿದ್ಯಾಲಯ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಲುಷಿತ ನೀರು ಪೂರೈಕೆ; ಶುದ್ಧ ನೀರಿಗಾಗಿ ಮೈಕಲ್ ಪಾಳ್ಯ ನಿವಾಸಿಗಳ ಪರದಾಟ

“ಶಿಲ್ಪಶ್ರೀ ಅವರ ಕುಟುಂಬದ ಆರ್ಥಿಕ ಪರಿಸ್ಥಿತಿ ಪರಿಗಣಿಸಿ ವಿಶ್ವವಿದ್ಯಾನಿಲಯವು ₹4 ಲಕ್ಷ ಪರಿಹಾರ ನೀಡಲು ನಿರ್ಧರಿಸಿದೆ” ಎಂದು ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಅಬ್ಬರದ ಜನಜಾಗೃತಿ ನಡುವೆಯೂ ಕರ್ತವ್ಯ ಮರೆತ ನಗರದ ಮಂದಿ: ಅದೇ ಹಳೆ ಕಥೆ

ಕರ್ನಾಟಕದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆದಿದೆ....

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ...