ಕಾಮನ್‌ವೆಲ್ತ್‌ ಗೇಮ್ಸ್‌ | ಭಾರತಕ್ಕೆ ಮೊದಲ ಪದಕ ತಂದ ಸಂಕೇತ್‌ ಸರ್ಗರ್

22ನೇ ಆವೃತ್ತಿಯ ಕಾಮನ್‌ವೆಲ್ತ್‌ ಗೇಮ್ಸ್‌ ಕೂಟದಲ್ಲಿ ಭಾರತಕ್ಕೆ ಮೊದಲ ಪದಕ ಲಭಿಸಿದೆ.  ವೇಟ್‌ಲಿಫ್ಟಿಂಗ್‌ನ ಪುರುಷರ 55 ಕೆಜಿ ವಿಭಾಗದಲ್ಲಿ ಭಾರತದ ಸಂಕೇತ್ ಮಹಾದೇವ್‌ ಸರ್ಗರ್‌ ಅವರು ಬೆಳ್ಳಿ ಪದಕ ಗೆದ್ದು ಸಂಭ್ರಮಿಸಿದ್ದಾರೆ. ಸ್ನ್ಯಾಚ್‌ ಮತ್ತು ಕ್ಲೀನ್‌ ಮತ್ತು ಜರ್ಕ್‌ ವಿಭಾಗದಲ್ಲಿ ಒಟ್ಟು 248 ಕೆ.ಜಿ ಭಾರ ಎತ್ತಿದ ಸಂಕೇತ್‌, ಭಾರತಕ್ಕೆ ಮೊದಲ ಪದಕ ತಂದಿತ್ತರು.

ಸ್ನ್ಯಾಚ್‌ನಲ್ಲಿ ತನ್ನ ಮೂರನೇ ಪ್ರಯತ್ನದಲ್ಲಿ 113 ಕೆ.ಜಿ  ಭಾರ ಎತ್ತುವ ಮೂಲಕ ಮುನ್ನಡೆ ಸಾಧಿಸಿದ್ದ ಸಂಕೇತ್‌ ಕ್ಲೀನ್‌ ಮತ್ತು ಜರ್ಕ್‌ ವಿಭಾಗದ ಮೊದಲ ಪ್ರಯತ್ನದಲ್ಲೇ 135 ಕೆಜಿ ಭಾರ ಎತ್ತುವ ಮೂಲಕ ಚಿನ್ನದ ಭರವಸೆ ಮೂಡಿಸಿದ್ದರು. ಆದರೆ ನಂತರದ ಎರಡು ಪ್ರಯತ್ನಗಳಲ್ಲಿ 139 ಕೆಜಿ ಭಾರ ಎತ್ತುವ ಪ್ರಯತ್ನ ಮಾಡಿದರಾದರೂ ಯಶಸ್ವಿಯಾಗಲಿಲ್ಲ. ಈ ವಿಭಾಗದಲ್ಲಿ ಮಲೇಷ್ಯಾದ ಮುಹಮ್ಮದ್‌ ಅನಿಖ್‌ ಚಿನ್ನದ ಪದಕಕ್ಕೆ ಕೊರೊಳೊಡ್ಡಿದರು.

Eedina App
ನಿಮಗೆ ಏನು ಅನ್ನಿಸ್ತು?
0 ವೋಟ್
eedina app