ರಾಜೇಶ್ವರಿ ಗಾಯಕ್ವಾಡ್‌, ಅಶ್ವಿನಿ ಪೊನ್ನಪ್ಪಗೆ ₹15 ಲಕ್ಷ ನಗದು ಬಹುಮಾನ

  • ಕಾಮನ್‌ವೆಲ್ತ್ ವಿಜೇತರಿಗೆ ಬಹುಮಾನದ ಗೌರವ
  • ಗುರುರಾಜ ಪೂಜಾರಿಗೆ 8 ಲಕ್ಷ ನಗದು ಪುರಸ್ಕಾರ

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ ಕ್ರೀಡಾಕೂಟದಲ್ಲಿ ಪದಕ ಗೆದ್ದ ಕರ್ನಾಟಕದ  ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದಿಂದ ನಗದು ಬಹುಮಾನ ಘೋಷಿಸಲಾಗಿದೆ. ಬ್ಯಾಡ್ಮಿಂಟನ್ ಮಿಕ್ಸಡ್ ಡಬಲ್ಸ್‌ನಲ್ಲಿ ಬೆಳ್ಳಿ ಗೆದ್ದ ಕನ್ನಡತಿ ಅಶ್ವಿನಿ ಪೊನ್ನಪ್ಪ ಮತ್ತು ಬೆಳ್ಳಿ ಪದಕ ಗೆದ್ದ ಭಾರತ ಮಹಿಳಾ ಕ್ರಿಕೆಟ್‌ ತಂಡವನ್ನು ಪ್ರತಿನಿಧಿಸಿದ್ದ ಕನ್ನಡತಿ ರಾಜೇಶ್ವರಿ ಗಾಯಕ್ವಾಡ್‌ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ₹15 ಲಕ್ಷ ನಗದು ಬಹುಮಾನ ಘೋಷಿಸಲಾಗಿದೆ.

ಕಾಮನ್‌ವೆಲ್ತ್‌ ಕೂಟದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ ರಾಜ್ಯದ ಕ್ರೀಡಾಪಟುಗಳಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ ನಾರಾಯಣಗೌಡ ಅಭಿನಂದನೆ ಸಲ್ಲಿಸಿದ್ದಾರೆ.

Image

"ಭಾರತದ ಮಹಿಳಾ ಕ್ರಿಕೆಟ್‌ ತಂಡವು ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಸಣ್ಣ ಅಂತರದಲ್ಲಿ ಚಿನ್ನದ ಪದಕ ಕೈತಪ್ಪಿದೆ. ಈ ತಂಡದಲ್ಲಿದ್ದ ಕರ್ನಾಟಕದ ರಾಜೇಶ್ವರಿ ಅವರಿಗೆ ರಾಜ್ಯ ಸರ್ಕಾರದ ವತಿಯಿಂದ ನಗದು ಬಹುಮಾನ ನೀಡಿ ಗೌರವಿಸಲಾಗುವುದು" ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ ? : ಕಾಮನ್‌ವೆಲ್ತ್‌ ಗೇಮ್ಸ್‌ |  ಭಾರತದ ಪದಕ ವೀರರ ಪಟ್ಟಿ ಇಲ್ಲಿದೆ ನೋಡಿ

ಈಗಾಗಲೇ ವೇಟ್ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಕುಂದಾಪುರದ ಗುರುರಾಜ ಪೂಜಾರಿಗೆ, ರಾಜ್ಯ ಸರ್ಕಾರದ ವತಿಯಿಂದ ₹8 ಲಕ್ಷ ನಗದು ಬಹುಮಾನ ಘೋಷಿಸಲಾಗಿದೆ. ಇವರೆಲ್ಲರಿಗೂ ಶೀಘ್ರದಲ್ಲೇ ಮುಖ್ಯಮಂತ್ರಿಗಳ ಮೂಲಕ ನಗದು ಪುರಸ್ಕಾರ ನೀಡಿ ಗೌರವಿಸಲಾಗುವುದು. ಎಂದು ಸಚಿವ ಡಾ ನಾರಾಯಣಗೌಡ ಅವರು ತಿಳಿಸಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್