ಇದೀಗ | ಕಾಮನ್‌ವೆಲ್ತ್‌ ಬ್ಯಾಡ್ಮಿಂಟನ್‌ನಲ್ಲಿ ಭಾರತಕ್ಕೆ ಮೂರನೇ ಚಿನ್ನದ ಪದಕ

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ 22ನೇ ಆವೃತ್ತಿಯ ಕಾಮನ್‌ವೆಲ್ತ್‌ ಕ್ರೀಡಾಕೂಟದ ಬ್ಯಾಡ್ಮಿಂಟನ್‌ನಲ್ಲಿ ಸೋಮವಾರ, ಭಾರತ ಮೂರನೇ ಚಿನ್ನದ ಪದಕ ಜಯಿಸಿದೆ.

ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಲಕ್ಷ್ಯ ಸೇನ್‌ ಮತ್ತು ಮಹಿಳೆಯರ ವಿಭಾಗದಲ್ಲಿ ಪಿ ವಿ ಸಿಂಧು ಚಿನ್ನದ ಪದಕವನ್ನು ಗೆದ್ದ ಬಳಿಕ, ಪುರುಷರ ಡಬಲ್ಸ್‌ ವಿಭಾಗದಲ್ಲೂ ಭಾರತೀಯರು ಸ್ವರ್ಣ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಭಾರತದ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ, ಇಂಗ್ಲೆಂಡ್‌ನ ಬೆನ್ ಲೇನ್/ ಸೀನ್ ವೆಂಡಿ ಜೋಡಿಯನ್ನು 21-15, 21-13 ನೇರ ಸೆಟ್‌ಗಳ ಅಂತರದಲ್ಲಿ ಸೋಲಿಸಿದರು. ಆ ಮೂಲಕ ಬ್ಯಾಡ್ಮಿಂಟನ್‌ನಲ್ಲಿ ಭಾರತ ಹ್ಯಾಟ್ರಿಕ್‌ ಚಿನ್ನದ ಪದಕದ ಸಾಧನೆ ಮಾಡಿದಂತಾಗಿದೆ.

ನಿಮಗೆ ಏನು ಅನ್ನಿಸ್ತು?
1 ವೋಟ್