ಇದೀಗ | ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಚೊಚ್ಚಲ ಚಿನ್ನದ ಪದಕ ಗೆದ್ದ ಪಿವಿ ಸಿಂಧು

ಭಾರತದ ಸ್ಟಾರ್‌ ಶಟ್ಲರ್‌, ಎರಡು ಬಾರಿಯ ಒಲಿಂಪಿಕ್‌ ಪದಕ ವಿಜೇತೆ ಪಿವಿ ಸಿಂಧು ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ತಮ್ಮ ಮೊದಲ ಚಿನ್ನದ ಪದಕ ಕೊರಳಿಗೇರಿಸಿದ್ದಾರೆ.  

ಮಹಿಳಾ ಸಿಂಗಲ್ಸ್‌ನ ಫೈನಲ್‌ನಲ್ಲಿ ಸಿಂಧು, ಕೆನಡಾದ ಮಿಚೆಲ್ ಲಿ ಅವರನ್ನು 21-15, 21-13 ಅಂತರದಿಂದ ನೇರ ಸೆಟ್‌ಗಳಿಂದ ಸೋಲಿಸಿ ಚಿನ್ನದ ಪದಕ ಗೆದ್ದರು.

ಭಾನುವಾರ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಸಿಂಧು, ಸಿಂಗಾಪುರದ ಯೆವೊ ಜಿಯಾ ಮಿನ್ ವಿರುದ್ಧ 21-19, 21-17 ಅಂತರದಲ್ಲಿ 49 ನಿಮಿಷಗಳಲ್ಲೇ ಗೆಲುವು ದಾಖಲಿಸಿದ್ದರು. ಆ ಮೂಲಕ ಸತತ 2ನೇ ಆವೃತ್ತಿಯಲ್ಲಿ ಫೈನಲ್‌ಗೇರಿದ್ದರು. ಕಳೆದ ಆವೃತ್ತಿಯ ಫೈನಲ್‌ನಲ್ಲಿ ಸಿಂಧು, ಸೈನಾ ನೆಹ್ವಾಲ್ ವಿರುದ್ಧ ಸೋತು ಬೆಳ್ಳಿಗೆ ತೃಪ್ತಿಪಟ್ಟಿದ್ದರು.

 

ನಿಮಗೆ ಏನು ಅನ್ನಿಸ್ತು?
1 ವೋಟ್