ಬಾಂಗ್ಲಾದೇಶ- ಭಾರತ ಸರಣಿ | ಟಾಸ್‌ ಗೆದ್ದ ಬಾಂಗ್ಲಾ ಬೌಲಿಂಗ್ ಆಯ್ಕೆ; ಕುಲ್ದೀಪ್ ಸೇನ್ ಏಕದಿನ ಪದಾರ್ಪಣೆ

BAN - IND
  • ಬಾಂಗ್ಲಾದೇಶದ ಢಾಕಾದಲ್ಲಿ ನಡೆಯಲಿರುವ ಪಂದ್ಯ
  • ತಂಡಕ್ಕೆ ಮರಳಿದ ಕೊಹ್ಲಿ, ರೋಹಿತ್ ಮತ್ತು ರಾಹುಲ್

ಭಾರತ ತಂಡ ಇಂದು ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಏಕದಿನ ಸರಣಿಯ ಮೊದಲ ಪಂದ್ಯ  ಢಾಕಾದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾ ನಾಯಕ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಈ ಸರಣಿಗಾಗಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಕೆ ಎಲ್ ರಾಹುಲ್ ಅವರಂತಹ ಆಟಗಾರರು ಟೀಂ ಇಂಡಿಯಾಕ್ಕೆ ಮರಳಿದ್ದಾರೆ.

Eedina App

ಬಾಂಗ್ಲಾದೇಶದ ನಿಯಮಿತ ನಾಯಕ ತಮೀಮ್ ಇಕ್ಬಾಲ್ ಗಾಯದ ಕಾರಣದಿಂದಾಗಿ ಸರಣಿಯಿಂದ ಹೊರಗುಳಿದಿದ್ದರು. ಅವರ ಸ್ಥಾನದಲ್ಲಿ ಈ ಜವಾಬ್ದಾರಿಯನ್ನು ಬ್ಯಾಟ್ಸ್‌ಮನ್ ಲಿಟನ್ ದಾಸ್ ಅವರಿಗೆ ನೀಡಲಾಗಿದೆ. ಉಳಿದ ಎರಡು ಏಕದಿನ ಪಂದ್ಯಗಳೂ ಇಲ್ಲಿಯೇ ನಡೆಯಲಿವೆ.

ತಂಡಗಳುಭಾರತ

AV Eye Hospital ad

ರೋಹಿತ್ ಶರ್ಮಾ (ಸಿ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಮೊಹಮ್ಮದ್ ಸಿರಾಜ್, ಕುಲದೀಪ್ ಸೇನ್

ಬಾಂಗ್ಲಾದೇಶ :

ಲಿಟ್ಟನ್ ದಾಸ್ (ಸಿ), ಅನಾಮುಲ್ ಹಕ್, ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ಡಬ್ಲ್ಯೂ), ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಹಸನ್ ಮಹ್ಮದ್, ಮುಸ್ತಫಿಜುರ್ ರೆಹಮಾನ್, ಎಬಾಡೋತ್ ಹೊಸೈನ್

ನಿಮಗೆ ಏನು ಅನ್ನಿಸ್ತು?
0 ವೋಟ್
eedina app