ಏಕದಿನ ಸರಣಿ | ಟಾಸ್ ಗೆದ್ದ ನ್ಯೂಜಿಲೆಂಡ್, ಟೀಮ್ ಇಂಡಿಯಾದಲ್ಲಿ ಎರಡು ಬದಲಾವಣೆ

  • ಪಂದ್ಯ ಗೆದ್ದರೆ ಭಾರತಕ್ಕೆ ನಂಬರ್‌ 1 ಸ್ಥಾನ
  • ತಂಡಕ್ಕೆ ಮರಳಿದ ಯಜ್ವೇಂದ್ರ ಚಹಾಲ್

ಏಕದಿನ ಸರಣಿಯ ಮೂರನೇ ಪಂದ್ಯದ ಟಾಸ್ ಗೆದ್ದ ನ್ಯೂಜಿಲೆಂಡ್, ಆತಿಥೇಯ ಭಾರತವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.

ಇಂದೋರ್‌ನ ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು, ಇದಕ್ಕೂ ಮೊದಲು ಈ ಮೈದಾನದಲ್ಲಿ ಆಡಿರುವ 5 ಏಕದಿನ ಪಂದ್ಯಗಳಲ್ಲಿ ಭಾರತ ಜಯಭೇರಿ ಬಾರಿಸಿದೆ.

ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳನ್ನು ಗೆದ್ದಿರುವ ರೋಹಿತ್ ಪಡೆ, ಈಗಾಗಲೇ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಆದರೆ ಇಂದಿನ ಪಂದ್ಯವನ್ನು ಗೆದ್ದರೆ, ಐಸಿಸಿ ಏಕದಿನ ರ‍್ಯಾಂಕಿಂಗ್‌ನಲ್ಲಿ ಭಾರತ ನಂಬರ್‌ 1 ಸ್ಥಾನಕ್ಕೇರಲಿದೆ.

ಸದ್ಯ 110 ಅಂಕಗಳೊಂದಿಗೆ ಭಾರತ, ಏಕದಿನ ಶ್ರೇಯಾಂಕದಲ್ಲಿ 4ನೇ ಸ್ಥಾನದಲ್ಲಿದೆ. ಹೋಳ್ಕರ್ ಮೈದಾನದಲ್ಲಿ ಗೆದ್ದರೆ ನ್ಯೂಜಿಲೆಂಡ್, ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯ ತಂಡಗಳನ್ನು ಹಿಂದಿಕ್ಕಲಿದೆ. ಇಂದಿನ ಔಪಚಾರಿಕ ಪಂದ್ಯದಲ್ಲಿ ಭಾರತ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿಯಲಿದೆ.

ವೇಗಿಗಳಾದ ಮುಹಮ್ಮದ್ ಶಮಿ ಮತ್ತು ಮುಹಮ್ಮದ್ ಸಿರಾಜ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಇವರ ಸ್ಥಾನವನ್ನು ಉಮ್ರಾನ್ ಮಲಿಕ್ ಮತ್ತು ಯಜ್ವೇಂದ್ರ ಚಹಾಲ್ ತುಂಬಲಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app