ಏಕದಿನ ರ್‍ಯಾಂಕಿಂಗ್‌| ಮೊದಲ ಸ್ಥಾನಕ್ಕೆ ಬುಮ್ರಾ ಲಗ್ಗೆ

  • ನ್ಯೂಜಿಲೆಂಡ್‍ನ ಟ್ರೆಂಟ್ ಬೌಲ್ಟ್‌ 712 ಅಂಕಗಳೊಂದಿಗೆ 2ನೇ ಸ್ಥಾನ
  • 730 ದಿನಗಳ ಕಾಲ ಐಸಿಸಿ ಏಕದಿನ ಬೌಲರ್‌ಗಳ ರ‍್ಯಾಂಕಿಂಗ್‌ನಲ್ಲಿದ್ದ  ಬುಮ್ರಾ

ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಕೇವಲ 19 ರನ್‌ ನೀಡಿ 6 ವಿಕೆಟ್ ಕಬಳಿಸುವ ಮೂಲಕ ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಪ್ರದರ್ಶನ ನೀಡಿದರು. ಈ ಪಂದ್ಯದಲ್ಲಿ ಭಾರತ 10 ವಿಕೆಟ್‌ಗಳ ಗೆಲುವು ಸಾಧಿಸಿತು.

ಇದರ ಬೆನ್ನಲ್ಲೇ ಐಸಿಸಿ ಏಕದಿನ ರ‍್ಯಾಂಕಿಂಗ್‌ ಪ್ರಕಟಗೊಂಡಿದ್ದು, ಬೌಲಿಂಗ್ ವಿಭಾಗದಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ ಮೊದಲ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. 

ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ ಈ ಹಿಂದೆ ಬರೋಬ್ಬರಿ 730 ದಿನಗಳ ಕಾಲ ಐಸಿಸಿ ಏಕದಿನ ಬೌಲರ್‌ಗಳ ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನದಲ್ಲಿದ್ದರು. ಆದರೆ 2020ರ ಫೆಬ್ರವರಿಯಲ್ಲಿ ಜಸ್ಪ್ರೀತ್ ಬುಮ್ರಾ ಆ ಸ್ಥಾನವನ್ನು ಕಳೆದುಕೊಂಡಿದ್ದರು. ನ್ಯೂಜಿಲೆಂಡ್ ವೇಗಿ ಟ್ರೆಂಟ್ ಬೌಲ್ಟ್‌, ಬುಮ್ರಾರನ್ನು ಹಿಂದಿಕ್ಕಿ ಏಕದಿನ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರಿದ್ದರು. ಮಾರಕ ವೇಗಿ ಬುಮ್ರಾ, ಈ ಮೊದಲು ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿಯೂ ನಂ.1 ಸ್ಥಾನವನ್ನು ಅಲಂಕರಿಸಿದ್ದ ಬುಮ್ರಾ ಟೆಸ್ಟ್ ಕ್ರಿಕೆಟ್‌ನ ಬೌಲಿಂಗ್ ವಿಭಾಗದಲ್ಲಿ 3ನೇ ಸ್ಥಾನದಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ವನಿತಾ ಹಾಕಿ ವಿಶ್ವಕಪ್: ಭಾರತಕ್ಕೆ ಮೊದಲ ಗೆಲುವು

ಬುಮ್ರಾ ಒಟ್ಟು 718 ಅಂಕಗಳೊಂದಿಗೆ ನಂಬರ್ 1 ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್‍ನ ಟ್ರೆಂಟ್ ಬೌಲ್ಟ್‌ 712 ಅಂಕಗಳೊಂದಿಗೆ 2ನೇ ಸ್ಥಾನ ಪಡೆದಿದ್ದಾರೆ. ಮೂರನೇ ಸ್ಥಾನದಲ್ಲಿ ಪಾಕಿಸ್ತಾನದ ಶಾಹೀನ್ ಅಫ್ರಿದಿ ಕಾಣಿಸಿಕೊಂಡಿದ್ದಾರೆ. ರ್‍ಯಾಂಕಿಂಗ್‌ನಲ್ಲಿ ಭಾರತ, ಪಾಕಿಸ್ತಾನ, ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶದ ತಲಾ ಒಬ್ಬೊಬ್ಬ ಆಟಗಾರ ಸ್ಥಾನ ಪಡೆದರೆ, ನ್ಯೂಜಿಲೆಂಡ್‍ನ ಇಬ್ಬರು ಮತ್ತು ಅಫ್ಘಾನಿಸ್ತಾನದ ಮೂರು ಮಂದಿ ಆಟಗಾರರು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್