ನಟಿ ಮೇಘನಾ ರಾಜ್‌ ಮುಡಿಗೆ ಅಂತಾರಾಷ್ಟ್ರೀಯ ಪ್ರಶಸ್ತಿಯ ಗರಿ

meghana raj
  • ʼಫೆಸ್ಟಿವಲ್ ಆಫ್ ಗ್ಲೋಬ್ʼ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿರುವ ನಟಿ
  • ಅಮಿತಾಬ್‌ ಬಚ್ಚನ್, ಧರ್ಮೇಂದ್ರಗೆ ಒಲಿದಿದ್ದ ʼಫಾಗ್‌ ಹೀರೊʼ ಪ್ರಶಸ್ತಿ

ಇತ್ತೀಚೆಗೆ ವೃತ್ತಿ ಬದುಕಿನ ಎರಡನೇ 'ಇನ್ನಿಂಗ್ಸ್' ಆರಂಭಿಸಿ ಕೇವಲ ನಟನೆ ಮಾತ್ರವಲ್ಲದೆ ಸಿನಿಮಾ ನಿರ್ಮಾಣದಲ್ಲೂ ತೊಡಗಿಕೊಂಡಿರುವ ನಟಿ ಮೇಘನಾ ರಾಜ್ ಅವರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ ಒಲಿದು ಬಂದಿದೆ.

ಅಮೆರಿಕಾದಲ್ಲಿರುವ ಅನಿವಾಸಿ ಭಾರತೀಯರು ಪ್ರತಿವರ್ಷ ಭಾರತದ ಸಾಧಕರನ್ನು ಗುರುತಿಸಿ ಕೊಡಮಾಡುವ ʼಫಾಗ್‌ ಹೀರೊʼ ಪ್ರಶಸ್ತಿಗೆ ಮೇಘನಾ ರಾಜ್ ಆಯ್ಕೆಯಾಗಿದ್ದಾರೆ. ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮಿಸಲು ಅಮೆರಿಕಾದಲ್ಲಿರುವ ಅನಿವಾಸಿ ಭಾರತೀಯರು ʼಫೆಡರೇಷನ್ ಆಫ್ ಇಂಡೋ ಅಮೆರಿಕನ್ಸ್ ಆಫ್ ನಾರ್ತೆನ್ ಕ್ಯಾಲಿಫೋರ್ನಿಯಾʼ ಸಂಸ್ಥೆಯ ಮೂಲಕ ʼಫೆಸ್ಟಿವಲ್ ಆಫ್ ಗ್ಲೋಬ್ʼ ಸಂಭ್ರಮಾಚರಣೆಯನ್ನು ಪ್ರತಿವರ್ಷ ಹಮ್ಮಿಕೊಳ್ಳುತ್ತಾರೆ.

ಈ ಕಾರ್ಯಕ್ರಮದಲ್ಲಿ ಭಾರತದ ಒಬ್ಬ ಸಾಧಕರನ್ನು ಗುರುತಿಸಿ ʼಫಾಗ್ ಹೀರೊʼ ಪ್ರಶಸ್ತಿಯನ್ನು ನೀಡಲಾಗುತ್ತದೆ. ಅಮಿತಾಬ್ ಬಚ್ಚನ್, ಧರ್ಮೇಂದ್ರ ಸೇರಿದಂತೆ ಹಲವು ಗಣ್ಯರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಬಾರಿಯ ಪ್ರಶಸ್ತಿಗೆ ನಟಿ ಮೇಘನಾ ರಾಜ್ ಅವರನ್ನು ಆಯ್ಕೆ ಮಾಡಲಾಗಿದ್ದು, ಆಗಸ್ಟ್ 21ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಎಕ್ಸ್‌ಕ್ಲೂಸಿವ್‌ | ಹಲ್ಲೆ ಪ್ರಕರಣ ; ತೆಲುಗು ಧಾರಾವಾಹಿಯಿಂದ ಹೊರಬರಲು ಚಂದನ್‌ ನಿರ್ಧಾರ

ಪ್ರಶಸ್ತಿಗೆ ಆಯ್ಕೆಯಾದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ನಟಿ, "ಅಮಿತಾಬ್‌ ಬಚ್ಚನ್, ಧರ್ಮೇಂದ್ರ ಮುಂತಾದ ಗಣ್ಯರು ಪಡೆದಿರುವ ಈ ಪ್ರತಿಷ್ಠಿತ ಪ್ರಶಸ್ತಿಗೆ ನಾನು ಭಾಜನಳಾಗಿರುವುದಕ್ಕೆ ತುಂಬಾ ಸಂತೋಷವಾಗಿದೆ. ಅಂತಹ ಮಹಾನ್ ನಟರಿಗೆ ಸಂದಿರುವ ಪ್ರಶಸ್ತಿಗೆ ಈ ಬಾರಿ ನಾನು ಆಯ್ಕೆಯಾಗಿರುವುದು ನನ್ನ ಪುಣ್ಯ. ನನ್ನ ತಂದೆಯ ಮೂಲಕ ಈ ವಿಷಯ ನನಗೆ ತಿಳಿಯಿತು. ಕನ್ನಡ ಚಿತ್ರರಂಗ ಈಗ ಇಡೀ ವಿಶ್ವದಾದ್ಯಂತ ಜನಪ್ರಿಯವಾಗುತ್ತಿದೆ. ಕನ್ನಡಿಗಳಾಗಿ ಈ ಪ್ರಶಸ್ತಿ ಸ್ವೀಕರಿಸುತ್ತಿರುವುದು ಹೆಚ್ಚು ಖುಷಿ ನೀಡುತ್ತಿದೆ" ಎಂದು ಸಂತಸ ವ್ಯಕ್ತಪಡಿಸಿದರು.

ನಿಮಗೆ ಏನು ಅನ್ನಿಸ್ತು?
1 ವೋಟ್