ಉಪಾಧ್ಯಕ್ಷ ಚಿತ್ರದ ಡಬ್ಬಿಂಗ್‌ನಲ್ಲಿ ಬ್ಯುಸಿಯಾದ ಚಿಕ್ಕಣ್ಣ

upadhyaksha
  • ಉಪಾಧ್ಯಕ್ಷ ಚಿತ್ರದ ಬಹುಪಾಲು ಶೂಟಿಂಗ್‌ ಪೂರ್ಣ
  • ಸಾಧು ಕೋಕಿಲಾ ಅವರ ಲೂಪ್‌ ಸ್ಟುಡಿಯೋದಲ್ಲಿ ಡಬ್ಬಿಂಗ್‌ ಶುರು

ಹಾಸ್ಯನಟ ಶರಣ್‌ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ʼಅಧ್ಯಕ್ಷʼ ಸಿನಿಮಾ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿತ್ತು. ಈ ಚಿತ್ರದಲ್ಲಿ ಶರಣ್‌ ಅಧ್ಯಕ್ಷನ ಪಾತ್ರದಲ್ಲಿ ಕಾಣಿಸಿಕೊಂಡರೆ ಚಿಕ್ಕಣ್ಣ ಉಪಾಧ್ಯಕ್ಷನಾಗಿ ಗಮನ ಸೆಳೆದಿದ್ದರು. ಇದೀಗ ʼಉಪಾಧ್ಯಕ್ಷʼ ಎಂಬ ಶೀರ್ಷಿಕೆಯಲ್ಲೇ ಹೊಸ ಸಿನಿಮಾ ಮೂಡಿ ಬರ್ತಿದೆ. ಈ ಸಿನಿಮಾಗೆ ಚಿಕ್ಕಣ ಅವರೇ ನಾಯಕ. ಸದ್ಯ ʼಉಪಾಧ್ಯಕ್ಷʼ ಸಿನಿಮಾದ ಬಹುಪಾಲು ಚಿತ್ರೀಕರಣ ಮುಕ್ತಾಯಗೊಂಡಿದ್ದು, ಚಿಕ್ಕಣ್ಣ ಡಬ್ಬಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ.  

ತಮ್ಮ ಪಾತ್ರದ ಚಿತ್ರೀಕರಣ ಈಗಾಗಲೇ ಮುಗಿಸಿರುವ ಚಿಕ್ಕಣ್ಣ ಕಳೆದ ವಾರದಿಂದ ಡಬ್ಬಿಂಗ್‌ನಲ್ಲಿ ತೊಡಗಿಕೊಂಡಿದ್ದಾರೆ. ಸಾಧು ಕೋಕಿಲ ಒಡೆತನದ ʼಲೂಪ್ʼ ಸ್ಟುಡಿಯೋದಲ್ಲಿ ಚಿತ್ರದ ಡಬ್ಬಿಂಗ್‌ ಪ್ರಕ್ರಿಯೆ ನಡೆಯುತ್ತಿದೆ.

ಬರೋಬ್ಬರಿ 50 ದಿನಗಳ ಕಾಲ ಉಪಾಧ್ಯಕ್ಷ ಸಿನಿಮಾದ ಚಿತ್ರೀಕರಣ ನಡೆಸಲಾಗಿದೆ. ಮೈಸೂರು, ಚಿಕ್ಕಮಗಳೂರು, ಮೂಡಿಗೆರೆ ಮುಂತಾದ ಕಡೆಗಳಲ್ಲಿ ಚಿತ್ರೀಕರಣ ಮಾಡಲಾಗಿದ್ದು, ಸಂಭಾಷಣೆಯ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯ ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ ಉಳಿದಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಅನಿಲ್ ಕುಮಾರ್ ನಿರ್ದೇಶನದ ʼಉಪಾಧ್ಯಕ್ಷʼ ಚಿತ್ರದಲ್ಲಿ ಚಿಕ್ಕಣ್ಣ ಅವರಿಗೆ ನಾಯಕಿಯಾಗಿ ಯುವನಟಿ ಮಲೈಕ ಕಾಣಿಸಿಕೊಂಡಿದ್ದಾರೆ. ಸಾಧು ಕೋಕಿಲ, ರವಿ ಶಂಕರ್, ವೀಣಾ ಸುಂದರ್ ಮುಂತಾದ ಕಲಾವಿದರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಕನ್ನಡದ ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ ಒಡೆತನದ ʼಡಿ ಎನ್ ಸಿನಿಮಾಸ್ʼ ಬ್ಯಾನರ್‌ನ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಸ್ಮಿತಾ ಉಮಾಪತಿ ಹಾಗೂ ನಿರ್ಮಲ ಶ್ರೀನಿವಾಸ್ ಬಂಡವಾಳ ಹೂಡಿದ್ದಾರೆ. ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಶೇಖರ್ ಚಂದ್ರ ಛಾಯಾಗ್ರಹಣವಿದೆ.

ನಿಮಗೆ ಏನು ಅನ್ನಿಸ್ತು?
0 ವೋಟ್