ನವೆಂಬರ್ 1ರಂದು ಪುನೀತ್‌ ರಾಜ್‌ಕುಮಾರ್‌ಗೆ ʻಕರ್ನಾಟಕ ರತ್ನʼ ಪ್ರದಾನ

puneeth rajkumar
  • ಕನ್ನಡ ರಾಜ್ಯೋತ್ಸವ ದಿನಾಚರಣೆಯಂದೇ ಪ್ರಶಸ್ತಿ ಪ್ರದಾನ
  • ಟ್ವೀಟ್‌ ಮೂಲಕ ಮಾಹಿತಿ ನೀಡಿದ ಬಸವರಾಜ ಬೊಮ್ಮಾಯಿ

ಮುಂಬರುವ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನಾಚರಣೆಯ ವೇಳೆ ದಿವಂಗತ ನಟ ಪುನೀತ್ ರಾಜ್‌ಕುಮಾರ್‌ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.

ಇಂದು ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಪುನೀತ್ ಸ್ಮರಣಾರ್ಥ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿದ ಬಳಿಕ ಟ್ವಿಟರ್ ಮೂಲಕ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿಗಳು, "ಕನ್ನಡ ಚಿತ್ರರಂಗದ ಮೇರುನಟ ದಿ. ಡಾ. ಪುನೀತ್ ರಾಜ್‌ಕುಮಾರ್ ಅವರಿಗೆ "ಕರ್ನಾಟಕ ರತ್ನ" ಪ್ರಶಸ್ತಿಯನ್ನು ನವೆಂಬರ್ 1ರಂದು ಪ್ರದಾನ ಮಾಡಲು ತಿರ್ಮಾನಿಸಲಾಗಿದೆ" ಎಂದು ಬರೆದುಕೊಂಡಿದ್ದಾರೆ.

ಕಳೆದ ನವೆಂಬರ್‌ 16ರಂದು ಕನ್ನಡ ಚಿತ್ರರಂಗದ ವತಿಯಿಂದ ಆಯೋಜನೆಗೊಂಡಿದ್ದ ಪುನೀತ ನಮನ ಕಾರ್ಯಕ್ರಮದಲ್ಲಿ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಮುಖ್ಯಮಂತ್ರಿಗಳು ಫೋಷಿಸಿದ್ದರು. ಪುನೀತ್‌, ಕಲೆ ಮತ್ತು ಸಮಾಜ ಸೇವೆಯನ್ನು ಪರಿಗಣಿಸಿ ಕರ್ನಾಟಕ ರತ್ನ ನೀಡುತ್ತಿರುವುದಾಗಿ ತಿಳಿಸಿದ್ದರು. ಇತ್ತೀಚೆಗೆ ಮೈಸೂರು ವಿಶ್ವವಿದ್ಯಾಲಯ ನಟನಿಗೆ ಗೌರವ ಡಾಕ್ಟರೇಟ್‌ ನೀಡಿ ಗೌರವಿಸಿತ್ತು.

2021ರ ಅಕ್ಟೋಬರ್‌ 29ರಂದು ಪುನೀತ್‌ ರಾಜ್‌ಕುಮಾರ್‌ ಹೃದಯಾಘಾತದಿಂದ ನಿಧನರಾಗಿದ್ದರು.  

ನಿಮಗೆ ಏನು ಅನ್ನಿಸ್ತು?
0 ವೋಟ್