ಪಾಕಿಸ್ತಾನದ ನೆರೆ ಪೀಡಿತ ಪ್ರದೇಶಕ್ಕೆ ಹಾಲಿವುಡ್ ನಟಿ ಏಂಜೆಲೀನಾ ಜೋಲಿ ಭೇಟಿ

angelina jolie
  • ಪ್ರವಾಹದ ಬಳಿಕ ಪಾಕಿಸ್ತಾನದಲ್ಲಿ ಹೆಚ್ಚುತ್ತಿರುವ ಸಾಂಕ್ರಾಮಿಕ ರೋಗ
  • ನಿರಾಶ್ರಿತರಿಗೆ ನೆರವಿನ ಭರವಸೆ ನೀಡಿದ ನಟಿ ಏಂಜೆಲೀನಾ ಜೋಲಿ 

ಭೀಕರ ಪ್ರವಾಹ ಮತ್ತು ಸಾಂಕ್ರಾಮಿಕ ರೋಗದಿಂದ ತತ್ತರಿಸಿ ಹೋಗಿರುವ ನೆರೆಯ ರಾಷ್ಟ್ರ ಪಾಕಿಸ್ತಾನಕ್ಕೆ ಹಾಲಿವುಡ್‌ನ ಸ್ಟಾರ್ ನಟಿ ಏಂಜೆಲೀನಾ ಜೋಲಿ ಭೇಟಿ ನೀಡಿದ್ದಾರೆ.

ಮಂಗಳವಾರ ಕರಾಚಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಏಂಜೆಲೀನಾ, ಪ್ರವಾಹ ಪೀಡಿತ ಪ್ರದೇಶವಾದ ʼದಾಡುʼಗೆ ಭೇಟಿ ನೀಡಿ ಅಲ್ಲಿನ ನಿರಾಶ್ರಿತರ ಯೋಗಕ್ಷೇಮ ವಿಚಾರಿಸಿದ್ದಾರೆ. ಜೊತೆಗೆ ಆರ್ಥಿಕ ನೆರವು ನೀಡುವುದಾಗಿಯೂ ಭರವಸೆ ನೀಡಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

Image
angelina jolie

ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ಸಿಂಧ್‌, ಪಂಜಾಬ್‌, ಬಲೂಚಿಸ್ತಾನ, ದಾಡು ಸೇರಿದಂತೆ ಪಾಕಿಸ್ತಾನದ ಹಲವು ಪ್ರದೇಶಗಳು ಪ್ರವಾಹಕ್ಕೆ ಸಿಲುಕಿದ್ದವು. ಈ ಭೀಕರ ಪ್ರವಾಹದಲ್ಲಿ 1,000ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರೆ, ಲಕ್ಷಾಂತರ ಜನ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಸದ್ಯ ಪ್ರವಾಹ ಪರಿಸ್ಥಿತಿ ಹತೋಟಿಗೆ ಬಂದಿದೆಯಾದರೂ ನೆರೆ ಪೀಡಿತ ಪ್ರದೇಶಗಳಲ್ಲಿ ನಿಂತಿರುವ ಕೊಳಚೆ ನೀರಿನ ಪರಿಣಾಮ ಸ್ಥಳೀಯವಾಗಿ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ತೀವ್ರಗತಿಯಲ್ಲಿ ಹರಡುತ್ತಿದೆ.

ಈ ಸೋಂಕಿನಿಂದಾಗಿಯೇ ಪ್ರವಾಹ ಪೀಡಿತ ಪ್ರದೇಶಗಳಲ್ಲಿ 300ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಕಳೆದ ಒಂದು ದಶಕದಿಂದ ವಿಶ್ವಸಂಸ್ಥೆಯ ಪ್ರತಿನಿಧಿಯಾಗಿ ಜಗತ್ತಿನಾದ್ಯಂತ ನಿರಾಶ್ರಿತರಿಗೆ ನೆರವಾಗುತ್ತಿರುವ ಏಂಜೆಲೀನಾ ಜೋಲಿ, ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ನಿರಾಶ್ರಿತರಿಗೆ ಸಹಾಯ ಹಸ್ತ ಚಾಚುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ನಿಮಗೆ ಏನು ಅನ್ನಿಸ್ತು?
0 ವೋಟ್
Image
av 930X180